ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

ಬಾಗೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಕುಟುಂಬಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಬಾಗೂರು ಗ್ರಾಮದ ಮಹಿಳೆಯರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ದೂರು ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಮದ್ಯ ಮಾರಾಟ ನಿಂತಿತ್ತು. ಆದರೆ ಕಳೆದ ಆರು ತಿಂಗಳಿAದ ಮತ್ತೆ ಅಕ್ರಮವಾಗಿ ಮದ್ಯ ಮಾರಾಟ ಶುರುವಾಗಿದೆ. ಇದರಿಂದ ನಮ್ಮ ಗಂಡAದಿರು ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದಾರೆ. ಯಾವುದೇ ದುಡಿಮೆಯಿಲ್ಲ ಅಂತ ಅಳಲು ತೋಡಿಕೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟ ಮಾಡುವ ಮಹಿಳೆಗೆ ಎಷ್ಟೇ ಎಚ್ಚರಿಕೆ ನೀಡಿದರೂ ಪ್ರಯೋಜನವಾಗಿಲ್ಲ. ದೇವದುರ್ಗ ಶಾಸಕ ಶಿವನಗೌಡ ನಾಯಕ್ ಮದ್ಯ ಮಾರಾಟ ಮಾಡಲು ಹೇಳಿದ್ದಾರೆ ಅಂತ ಹೇಳುತ್ತಿದ್ದಾಳೆ. ಶಾಸಕರ ಕುಮ್ಮಕ್ಕಿದೆ ಅಂತ ಮಹಿಳೆಯರು ಆರೋಪಿಸಿದ್ದಾರೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಸಂಬAಧಿಕರಿಗೆ ಸೇರಿದ ವೈನ್ ಶಾಪ್ಗಳಿಂದಲೇ ಗ್ರಾಮದಲ್ಲಿ ಮದ್ಯ ಸಾಗಣೆ ಮಾಡಲಾಗುತ್ತಿದೆ. ತಕ್ಷಣವೇ ಅಕ್ರಮ ಮದ್ಯ ಮಾರಾಟ ಮಾಡುವ ವ್ಯಕ್ತಿಗಳನ್ನು ಗ್ರಾಮದಿಂದ ಗಡಿ ಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಣ್ಮುಚ್ಚಿ ಕುಳಿತ ಪೊಲೀಸ್ ಅಧಿಕಾರಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

Sat Jun 6 , 2020
ಅರಸೀಕೆರೆ ತಾಲೂಕಿಗೆ ಸೇರಿದೆ ಗೇರ್‌ಮರ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಮುಂದೆ ಕುಡಿದ ಮತ್ತಲ್ಲಿ ಇಬ್ಬರು ಜಗಳ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಕುಡಿದ ಮತ್ತಲ್ಲಿ ಮದ್ಯ ಸೇವಿಸಿದ ವ್ಯಕ್ತಿ ಹಾಗೂ ಟಿಟಿ ಗಾಡಿಯ ಮಾಲೀಕನ ಮದ್ಯ ಮಾರಾಮಾರಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಇಂತಹ ಊರುಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ಸೂಕ್ತ ಭದ್ರತೆಯನ್ನು ನೀಡಬೇಕು. ಈಗಿರುವ ಪೊಲೀಸರು ವಿಜಿಟಿಂಗ್ ನೀಡಲು ಮಾತ್ರ ಬರುತ್ತಾರೆ ಎಂದು […]

Advertisement

Wordpress Social Share Plugin powered by Ultimatelysocial