ದೆಹಲಿಯ ತುಘಲಕ್ ಬಾದ್ ಕೊಳಗೇರಿಯಲ್ಲಿ ಇಂದು ತಡರಾತ್ರಿ ಭಾರೀ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಸ್ಲಂ ನಲ್ಲಿ ಬೆಂಕಿ ಕಾಣಿಸಿಕೊಂಡಿತೆಂದು ಕರೆ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿಗಳು ಹಾಗೂ ೩೦ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆಗಲೇ ೧,೦೦೦ ದಿಂದ ೧,೨೦೦ ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದವು ಎಂದು ಉಪಪೊಲೀಸ್ ಆಯುಕ್ತ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ. ಬೆಂಕಿ ದುರಂತ ಸಂಭವಿಸಿದ ತಕ್ಷಣ ಗುಡಿಸಲುಗಳಲ್ಲಿ ಮಲಗಿದ್ದವರು ಹೊರಕ್ಕೆ ಓಡಿ ಬಂದಿದ್ದರಿಂದ ಯಾವುದೇ ಸಾವುನೋವುಗಳಾಗಿಲ್ಲ. ಅಪಘಾತದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಅಂದಾಜಿಸಲಾಗಿಲ್ಲ. ಆದರೆ ಈ ಅಪಘಾತಕ್ಕೆ ಕಾರಣಗಳೇನೆಂದು ಇದುವರೆಗೂ ತಿಳಿದುಬಂದಿಲ್ಲವೆಂದು ಪೋಲಿಸ್ ಮೂಲಗಳು ತಿಳಿಸಿವೆ.
ಅಗ್ನಿ ದುರಂತ ಗುಡಿಸಲುಗಳಿಗೆ ಬೆಂಕಿ

Please follow and like us: