ಅಸಂಘಟಿತ ಕಾರ್ಮಿಕರ ನೆರವಿಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ.

ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸದೇ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅಸಂಘಟಿತ ಕಾರ್ಮಿಕ ವಲಯದವರ ವಿಚಾರವಾಗಿ ಈವರೆಗೂ ಒಂದೇ ಒಂದು ಮಾತನ್ನೂ ಆಡಿಲ್ಲ. ಲಾಕ್​ಡೌನ್​ನಿಂದ ವಾಹನ ಚಾಲಕರು, ಕ್ಷೌರಿಕರು, ಬಟ್ಟೆ ಹೊಲಿಯುವವರು, ಆಟೋ ಚಾಲಕರು, ಹೊಟೇಲ್ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ವೃತ್ತಿಪರ ಕಾರ್ಮಿಕರಿಗೆ ಆದಾಯ ಇಲ್ಲದಂತಾಗಿದೆ. ಹೀಗಾಗಿ ಇವರಿಗೆ ತಿಂಗಳಿಗೆ 10 ಸಾವಿರದಂತೆ ಪ್ರೋತ್ಸಾಹ ಧನ ನೀಡಬೇಕು. ಇದರ ಬಗ್ಗೆ ಈಗಾಗಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ : ಈಶ್ವರಪ್ಪ

Tue Apr 28 , 2020
“ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಕೀಯ ಸಲ್ಲದು ಎಂದು ಸಚಿವ ಕೆ.ಎಸ್. ಈಶ್ವರಪ್ಪ  ಹೇಳಿದ್ದಾರೆ., ಚಿತ್ರದುರ್ಗದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ನರೇಗಾ ಬಗ್ಗೆ ಚರ್ಚಿಸಲು ಎಲ್ಲಿಗೆ ಬೇಕಾದರೂ ಬರಲು ನಾನು ಸಿದ್ದ. ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ”. “ಡಿಕೆಶಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ. ಡಿಕೆಶಿ ಸಚಿವರಾಗಿದ್ದಾಗ ಲೂಟಿ ಹೊಡೆದಿದ್ದು ಯಾರು? ಅವರು ಒಳ್ಳೆಯ ಕೆಲಸ ಮಾಡಿದ್ದಾರಾ, ಭ್ರಷ್ಟಾಚಾರ ಮಾಡಿದ್ದಾರಾ ಎಂಬುದು ಚರ್ಚೆ ಆಗಲಿ” […]

Advertisement

Wordpress Social Share Plugin powered by Ultimatelysocial