ಪಣಜಿ: ಮೇ 31 ರಂದು ಲಾಕ್ಡೌನ್ ಮುಕ್ತಾಯಗೊಳ್ಳಲಿದ್ದು, ಜೂನ್ 1 ರ ಬಳಿಕ ಏನು ಕಾರ್ಯತಂತ್ರ ಅನುಸರಿಸಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಹಿನ್ನೆಲೆಯಲ್ಲಿ ಲಾಕ್ಡೌನ್ 5.0 ಜಾರಿ ಮಾಡಬೇಕು ಎಂದು ಆಗ್ರಹಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್. ಇನ್ನೂ ಎರಡು ವಾರವಾದರೂ ಅಂದರೆ ಜೂನ್ 15ರವರೆಗೂ ಲಾಕ್ಡೌನ್ ಮುಂದುವರೆಸಬೇಕೆಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಮೋದ್ ಸಾವಂತ್, ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳನ್ನು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಲಾಕ್ಡೌನ್ನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ತಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜೂನ್ 15ರವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ಪ್ರಮೋದ್ ಸಾವಂತ್ ಸ್ಪಷ್ಟಪಡಿಸಿದ್ದಾರೆ.
ಇನ್ನೂ 15 ದಿನ ಲಾಕ್ ಡೌನ್ ವಿಸ್ತರಿಸುವಂತೆ ಗೋವಾ ಸಿಎಂ ಮನವಿ

Please follow and like us: