ಇಬ್ಬರು ವೈದ್ಯರ ಹೆಸರನ್ನೇ ಮಗನಿಗಿಟ್ಟ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್..

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರೇಯಸಿ ಕ್ಯಾರಿ ಸೈಮಂಡ್ಸ್ ತಮ್ಮ ಮಗನಿಗೆ ವಿಲ್ಫ್ರೆಡ್ ಲಾರಿ ನಿಕೋಲಸ್ ಜಾನ್ಸನ್ ಎಂದು ಹೆಸರಿಟ್ಟಿದ್ದಾರೆ. ಕೊರೊನ ಸೋಂಕಿನಿಂದ ತಮ್ಮನ್ನು ಕಾಪಾಡಿದ ಇಬ್ಬರು ವೈದ್ಯರಿಗೆ ಬೋರಿಸ್ ಈ ಮೂಲಕ ಗೌರವ ಸಲ್ಲಿಸಿದ್ದಾರೆ. ಮೂರು ದಿನದ ಮಗುವಿನ ಪೋಟೋವನ್ನು ಇನ್ಸ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸೈಮಂಡ್ಸ್, ತಮ್ಮ ಮಗನ ಹೆಸರಿನ ಆಯ್ಕೆಯ ಬಗ್ಗೆ ವಿವರಿಸಿದ್ದಾರೆ. ಅಲ್ಲದೆ ತನ್ನ ಪತ್ನಿಯ ಹೆರಿಗೆ ಸಮಯದಲ್ಲಿ ಶುಶ್ರೂಷೆ ಮಾಡಿದ ಲಂಡನ್ ವಿವಿ ಆಸ್ಪತ್ರೆಯ ವೈದ್ಯರ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.೨೯ ಏಪ್ರಿಲ್ ೨೦೨೦ ರಂದು ಬೆಳಗ್ಗೆ ೯ ಗಂಟೆಗೆ ಮಗು ಜನಿಸಿದೆ. ಕೊರೊನಾ ವೈರಸ್‌ಗೆ ತುತ್ತಾಗಿದ್ದ ಪ್ರಧಾನಿ ಬೋರಿಸ್ ಜಾನ್ಸನ್ಸ್ ಲಂಡನ್‌ನ ಸೇಂಟ್ ಥಾಮಸ್ ಆಸ್ಪತ್ರೆಯಲ್ಲಿ ಒಂದು ವಾರ ಕಳೆದಿದ್ದರು. ಅವರು ಗುಣಮುಖರಾಗಿ ಮರಳಿದ ಕೆಲವೇ ದಿನಗಳಲ್ಲಿ ಮಗುವಿನ ಜನನ ಆಗಿತ್ತು.

Please follow and like us:

Leave a Reply

Your email address will not be published. Required fields are marked *

Next Post

ಚಿತ್ರೀಕರಣ ಆರಂಭಿಸಲು ಸಿಎಂ ಗೆ ಮನವಿ

Sun May 3 , 2020
ಕೊರೊನಾ ಕಾರಣದಿಂದಾಗಿ ಕರ್ನಾಟಕದಾದ್ಯಂತ ಎಲ್ಲಾ ರೀತಿಯ ಚಿತ್ರೀಕರಣಗಳೂ ಬಂದ್ ಆಗಿದೆ. ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಸಡಿಲಿಕೆಯಾಗಿದ್ದು, ರೆಡ್​ ಝೋನ್​​ ಹೊರತುಪಡಿಸಿ ಉಳಿದೆಡೆ ಹಲವು ಚಟುವಟಿಕೆಗಳ ಪುನರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಗ್ರೀನ್ ಮತ್ತು ಆರೆಂಜ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಲಿರೋ ಹಿನ್ನೆಲೆ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಬೇಕೆಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಬಳಿ ಮನವಿ ಮಾಡಿದ್ದಾರೆ. ಕೊರೊನಾ ಭಾರತಕ್ಕೆ ಪ್ರವೇಶವಿಟ್ಟ […]

Advertisement

Wordpress Social Share Plugin powered by Ultimatelysocial