ಬೆಂಗಳೂರು: ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತ ಪದ್ಧತಿಗಳೆರಡರಲ್ಲೂ ನಿಪುಣರಾಗಿದ್ದ ಉಭಯ ಗಾನ ವಿದುಷಿ ಶ್ಯಾಮಲಾ ಜಿ. ಭಾವೆ(79) ಅವರು ಶೇಷಾದ್ರಿಪುರದ ಸ್ವಗೃಹದಲ್ಲಿಂದು ಬೆಳಗ್ಗೆ ವಿಧಿವಶರಾದರು. ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತ ಪದ್ಧತಿಗಳೆರಡರಲ್ಲೂ ನಿಪುಣರಾಗಿ, ಶಾಸ್ತ್ರೀಯ ಸಂಗೀತದ ಜೊತೆಗೆ ಸುಗಮ ಸಂಗೀತದಲ್ಲಿ ವಿಶೇಷ ಸಾಧನೆಗೈದವರು ಶ್ಯಾಮಲಾ ಜಿ. ಭಾವೆ. ಸಂಗೀತಕ್ಕಾಗಿ ತಮ್ಮ ಸಂಪೂರ್ಣ ಜೀವನವನ್ನು ಮೀಸಲಾಗಿರಿಸಿದ ಶ್ಯಾಮಲಾ ಅವರು ಕರ್ನಾಟಕ ಮಹಿಳಾ ಸಂಗೀತಗಾರರಲ್ಲಿ ಅಗ್ರಗಣ್ಯರು.
ಉಭಯ ಗಾನ ವಿದುಷಿ ಶ್ಯಾಮಲಾ ಜಿ. ಭಾವೆ ವಿಧಿವಶ

Please follow and like us: