ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಜಾಕಿರ್ ಹುಸೇನ್ ನಗರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹಳೆ ದ್ವೇಷ ಹಾಗೂ ರಾಜಕೀಯ ವೈಸಮ್ಯ ಕಾರಣದಿಂದ ಎರಡು ಗುಂಪುಗಳ ನಡುವೆ ಒಡೆದಾಟ ನಡೆದಿದೆ ಎನ್ನಲಾಗಿದೆ. ಸ್ಥಳದಲ್ಲೇ ಮೂರು ಹೆಣಗಳು ಹಾಗೂ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಜಕವುಲ್ಲ ಖಾನ್(35), ಇದ್ರಿಷ್(30), ಹಾಗೂ ಕೈಸರ್(35) ಸ್ಥಳದಲ್ಲೇ ಸತ್ತ ರ್ದುದೈವಿಗಳು . ಪಟ್ಟಣದ ಪೋಲಿಸರು ಸ್ಥಳಕ್ಕೆ ಅಗಮಿಸಿದ್ದಾರೆ. ಇಡೀ ಗುಂಡ್ಲುಪೇಟೆ ಪಟ್ಟಣ ಪ್ರಕ್ಷುಬ್ಧ ಸ್ಥಿತಿಯಲ್ಲಿದೆ.
ಎರಡು ಗುಂಪುಗಳ ನಡುವೆ ಮಾರಾಮಾರಿ

Please follow and like us: