ಕರಾವಳಿಯಲ್ಲಿ ವರುಣನ ಅಬ್ಬರ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಜೂ.4 ರಂದು ಜಿಲ್ಲೆಗೆ ಆಗಮಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು. ಇಂದು ಕರಾವಳಿ ಭಾಗದಲ್ಲಿ 115.6 ಮಿಲೀಮೀಟರ್ ನಿಂದ 204.4 ಮಿಲೀಮೀಟರ್ ನಷ್ಟು ಮಳೆಯಾಗಲಿದೆ, ಇದೇ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಮೀನುಗಾರಿಕೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರಿಗೆ ಸಿಹಿಸುದ್ದಿ 

Tue Jun 2 , 2020
ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಬೆಳೆಗಾರರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸಿದ್ದರು. ಹಾಗೂ ಕೆಲವು ಕಡೆ ರೈತರುಗಳು ಆತ್ಮಹತ್ಯಗೆ ಶರಣಾಗಿದ್ದರು.  ಈ ಹಿನ್ನಲೆಯಲ್ಲಿ ಮೆಕ್ಕೆಜೋಳ ಹಾಗೂ ಹೂವು ಬೆಳೆದ ರೈತರ ನೆರವಿಗೆ ಧಾವಿಸಿದ್ದ ರಾಜ್ಯ ಸರ್ಕಾರ ಪರಿಹಾರ ಧನ ನೀಡುವುದಾಗಿ ಪ್ರಕಟಿಸಿತ್ತು. ಅದೇ ರೀತಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು  ಗೃಹ ಕಚೇರಿ ಕೃಷ್ಣಾದಲ್ಲಿ ಆನ್ಲೈನ್ ಮೂಲಕ […]

Advertisement

Wordpress Social Share Plugin powered by Ultimatelysocial