ಕಾರ್ಮಿಕರಿಗೆ ೧೦ ಸಾವಿರ ಪರಿಹಾರ ನೀಡುವಂತೆ ಹೈಕೋರ್ಟ್ಗೆ ಅರ್ಜಿ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಕಾರ್ಮಿಕರಿಗೆ ತಲಾ ೧೦ ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ಎ.ಎಸ್.ಓಕ ಮತ್ತು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಅರ್ಜಿಯ ಮತ್ತೊಂದು ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ತಲುಪಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ೧೫ ದಿನಗಳಲ್ಲಿ ೧೦ ಸಾವಿರ ರೂ. ಜಮೆ ಮಾಡಬೇಕು ಹಾಗೂ ಅಸಂಘಟಿತ ಕಾರ್ಮಿಕರಿಗೆ ಪೂರಕವಾಗಿ ಪುನವರ್ಸತಿ ನಿಧಿ ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶಿವಾಜಿನಗರದ ಮೂರು ಗಲ್ಲಿ ಸೀಲ್​ಡೌನ್

Sat May 9 , 2020
ಹೌಸ್ ಕೀಪಿಂಗ್ ಹುಡುಗನೊಬ್ಬನಿಂದ ನಾಲ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಶಿವಾಜಿನಗರದ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಸೆಲ್ ಮಾರ್ಕೆಟ್, ಚಾಂದನಿ ಚೌಕ್ ಮತ್ತು ಕಮರ್ಷಿಯಲ್ ಸ್ಟ್ರೀಟ್ ರಸ್ತೆಗಳನ್ನು ಸಂಪೂರ್ಣ ಸೀಲ್​ಡೌನ್ ಮಾಡಲಾಗಿದೆ. ಜೊತೆಗೆ, ಶಿವಾಜಿನಗರ ಎಲ್ಲಾ ಪ್ರಮುಖ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿ ಪೊಲೀಸರು ಕಾವಲಿದ್ಧಾರೆ. ಲಾಕ್ ಡೌನ್ ವೇಳೆ ಶಿವಾಜಿನಗರದಲ್ಲಿ ಜನರು ಯಾವುದಕ್ಕೂ ಲೆಕ್ಕಿಸದೆ ರಾಜಾರೋಷವಾಗಿ ಓಡಾಡುತ್ತಿದ್ದುದು ಸೋಂಕು ವ್ಯಾಪಕವಾಗಿ ಹರಡಿರುವ ಭೀತಿ ಮೂಡಿದೆ. ವರದಿ: ಸ್ಪೀಡ್  ನ್ಯೂಸ್  […]

Advertisement

Wordpress Social Share Plugin powered by Ultimatelysocial