ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಆಂಫಾನ್ ಪೀಡಿತ ಪಶ್ವಿಮ ಬಂಗಾಳದಲ್ಲಿ ತೆರವು ಕಾರ್ಯಾಚಣೆಯಲ್ಲಿ ಪಾಲ್ಗೊಂಡಿರುವ ಫೋಟೋ ಜೊತೆಯಲ್ಲಿ ಮದ್ಯದ ಬಾಟಲಿಯ ಛಾಯಾಚಿತ್ರವನ್ನು ಕೇಂದ್ರ ಗೃಹ ಇಲಾಖೆ ತನ್ನ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕೇಂದ್ರ ಗೃಹ ಇಲಾಖೆಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ನಿರ್ಲಕ್ಷ್ಯದಿಂದ ತಪ್ಪಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಸಚಿವಾಲಯದ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ಆದರೆ, ಈ ಬಗ್ಗೆ ಗೃಹ ಸಚಿವಾಲಯ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನಿಡಿಲ್ಲ.
ಕೇಂದ್ರ ಗೃಹ ಇಲಾಖೆಯ ಎಡವಟ್ಟು

Please follow and like us: