ಕೇಂದ್ರ ಗೃಹ ಇಲಾಖೆ ಗರಂ

ದೇಶದಲ್ಲಿ ಮಾರಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಲಾಕ್ ಡೌನ್‌ನ್ನು ಮೇ.೩ರವರೆಗೆ ವಿಸ್ತರಿಸಲಾಗಿದೆ. ಆದರೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಯಾಕೆ ಆಗುತ್ತಿಲ್ಲ. ವಾಹನಗಳ ಸಂಚಾರ ಹೆಚ್ಚಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದೆ. ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ದಬ್ಬಾಳಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಈ ಮೊದಲೇ ಲಾಕ್‌ಡೌನ್ ನಿಯಮಗಳನ್ನು ಪಾಲಿಸಬೇಕೆಂದು ಕಟ್ಟುನಿಟ್ಟಿನ ಆದೇಶ ಆಗಿದ್ದರೂ, ರಾಜ್ಯ ಸರ್ಕಾರಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆ ಕೂಡ ಸರಿಯಾಗೆ ಮೇಲ್ವಿಚಾರಣೆ ಮಾಡುತ್ತಿಲ್ಲ ಎಂದು ಎಚ್ಚರಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ನೀರಿನಲ್ಲೂ ಕೋವಿಡ್ ಸೋಂಕು

Mon Apr 20 , 2020
ಫ್ರಾನ್ಸ್ ಕರೊನಾ ಸಂಕಷ್ಟಕ್ಕೆ ತತ್ತರಿಸಿದೆ. ಈವರೆಗೆ ಅಲ್ಲಿ ೧,೫೪,೦೯೮ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೧೯,೭೭೮ ಜನರು ಮೃತಪಟ್ಟಿದ್ದಾರೆ. ಕೋವಿಡ್-೧೯ ನಿಯಂತ್ರಣಕ್ಕೆ ಸಿಗದ ಕಾರಣ ಅಲ್ಲಿ ದೇಶಾದ್ಯಂತ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಇದೀಗ ಆಘಾತಕಾರಿ ಸುದ್ದಿಯೊಂದು ಪ್ಯಾರಿಸ್ ನಗರದಿಂದ ವರದಿಯಾಗಿದೆ. ಅಲ್ಲಿನ ನೀರಿನಲ್ಲೂ ಕರೊನಾ ವೈರಸ್ ಪತ್ತೆಯಾಗಿದೆ. ನೀರಿನಲ್ಲಿ ಅತಿ ಸಣ್ಣ ಪ್ರಮಾಣದಲ್ಲಿ ವೈರಸ್ ಕಣಗಳಿರುವುದು ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಪ್ರಮಾಣ ತೀರಾ ಕಡಿಮೆಯಿದ್ದು, ನಗರದಲ್ಲಿ ಸ್ವಚ್ಛತಾ […]

Advertisement

Wordpress Social Share Plugin powered by Ultimatelysocial