ಬೆಂಗಳೂರು: ಕೊರೊನಾ ಸಂಕಷ್ಟದಿAದ ಜನರನ್ನು ಪಾರು ಮಾಡಲು ಕೇಂದ್ರ ಸರ್ಕಾರ ಘೋಷಿಸಿರುವ ೨೦ ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವಲಸೆ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುವುದರಿಂದ ಅವರಿಗೆ ಸಹಾಯವಾದಂತಾಗುತ್ತದೆ.
ಇದರಿಂದ ವಲಸೆ ಕಾರ್ಮಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಸಹಾಯವಾಗುವುದಲ್ಲದೇ ಆರ್ಥಿಕತೆಗೆ ಉತ್ತೇಜನವೂ ದೊರೆಯಲಿದೆ ಎಂದು ಹೇಳಿದ್ದಾರೆ. ವಲಸೆ ಕಾರ್ಮಿಕರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಅವರ ಖಾತೆಗೆ ನೇರವಾಗಿ ಹಣ ವರ್ಗಾಯಿಸುವಂತೆ ದೇಶದ ಪ್ರಮುಖ ಉದ್ಯಮಿಗಳು ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮುಂದಿನ ಆರು ತಿಂಗಳುಗಳ ಕಾಲ ಪ್ರತಿ ತಿಂಗಳು ೧೦ ಸಾವಿರ ರು.ಗಳನ್ನು ವಲಸೆ ಕಾರ್ಮಿಕರಿಗೆ ನೇರವಾಗಿ ನೀಡಿ ಎಂದು ಸಲಹೆ ಕೊಟ್ಟಿದ್ದಾರೆ. ರಾಜ್ಯಗಳಿಗೆ ಡಿಸೆಂಬರ್, ಜನವರಿ ತಿಂಗಳ ಜಿಎಸ್ಟಿ ಪರಿಹಾರದ ಸುಮಾರು ೩೪ ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಕೊರೊನಾ ನೆಪದಲ್ಲಿ ಸುಧಾರಣೆ ಕಾರಣ ನೀಡಿ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಕೇಂದ್ರ ಸರಕಾರ ತೊಡಗಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಖರ್ಗೆ ಆಗ್ರಹ

Please follow and like us: