ನವದೆಹಲಿ: ಲಾಕ್ಡೌನ್ ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟಿವಿ, ರೇಡಿಯೋ ಮೂಲಕ ವಿವಿಧ ಅವಧಿಗಳಲ್ಲಿ ಶಿಕ್ಷಣ ಪ್ರಸಾರ ಮಾಡಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಹಾರಾಷ್ಟ್ರದ ಶಿಕ್ಷಣ ಸಚಿವೆ ಮನವಿ ಮಾಡಿದ್ದಾರೆ. ಡಿಡಿ ನ್ಯಾಷನಲ್ ಚಾನೆಲ್ನಲ್ಲಿ 12 ಗಂಟೆಗಳ ಅವಧಿ (ಸ್ಲಾಟ್) ಹಾಗೂ ರೇಡಿಯೊದಲ್ಲಿ 2 ಗಂಟೆ ಅವಧಿ (ಸ್ಲಾಟ್) ನೀಡಬೇಕೆಂದು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕ್ರಮಬದ್ಧವಾಗಿ ಈ ರೀತಿಯ ಸ್ಲಾಟ್ಗಳನ್ನು ನೀಡಿದರೆ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕಾರ್ಯಗಳು ಪ್ರಾರಂಭವಾಗಿದ್ದು, ನಾವು ಈಗಾಗಲೇ 1000 ಗಂಟೆಗಳ ಅಧ್ಯಯನ ಸಾಮಗ್ರಿಯನ್ನು ಸಂಗ್ರಹಿಸಿದ್ದೇವೆ. ಮಹಾರಾಷ್ಟ್ರ ಎಸ್ಸಿಇಆರ್ಟಿ ಪ್ರಸಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಮನವಿ

Please follow and like us: