ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್…!

ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಐಟಿ-ಬಿಟಿ ಕಂಪನಿ ತೆರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ. ಅಲ್ಲದೆ ಮೇ 3ರ ತನಕ ಲಾಕ್‍ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ರಿಯಾಯಿತಿ ಇರುವುದಿಲ್ಲ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದ್ದು ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರವಷ್ಟೇ ಲಾಕ್ ಡೌನ್ ಸಡಿಲಿಕೆ ಸಂಬಂಧ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

 

 

Please follow and like us:

Leave a Reply

Your email address will not be published. Required fields are marked *

Next Post

ವಿಮಾನಯಾನ ನಿರ್ಬಂಧ ಹಿಂತೆಗೆತ

Mon Apr 20 , 2020
ಕೊರೊನಾ ಹರಡುವಿಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಾಗ ಮಾತ್ರ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಭಂಧ ಹಿಂದಕ್ಕೆ ತೆಗೆಯಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೋನಾ ಹರಡುವಿಕೆ ಕಡಿಮೆಯಾಗಿ, ಭಾರತೀಯರಿಗೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂಬ ವಿಶ್ವಾಸ ಬಂದಾಗ ಮಾತ್ರ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ. Please follow and like […]

Advertisement

Wordpress Social Share Plugin powered by Ultimatelysocial