ಕೊರೋನಾ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 1 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊರೋನಾ ಸೋಂಕಿನ ಪ್ರಕರಣ ಸಂಬಂಧ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ, ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 47 ವರ್ಷದ ಮಹಿಳೆಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಇದುವರೆಗೆ 18 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರಾಗಿದ್ದಂತ 177 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಕನ್ನಡದಲ್ಲಿ ಟ್ವೀಟ್ ಮಾಡಿದ ಕೇರಳ ಸಿಎಂ

Sun Apr 26 , 2020
ಕೇರಳ: ಇಂದು ಜಗತ್ತಿಗೆ ಅನುಭವ ಮಂಟಪ ಮೂಲಕ ಪ್ರಜಾಪ್ರಭುತ್ವದ ಪರಿಚಯ ಮಾಡಿಕೊಟ್ಟ ಜಗಜ್ಯೋತಿ ಬಸವಣ್ಣನವರ ಜಯಂತಿ ಸಂಭ್ರಮ. ಈಗಾಗಲೇ ಬಸವಣ್ಣನವರ ಜಯಂತಿಗೆ ಪ್ರಧಾನಿ ಮೋದಿ ಸೇರಿದಂತೆ ನಾಡಿನ ಹಲವು ಗಣ್ಯರು ಜನತೆಗೆ ಶುಭ ಕೋರಿ ಬಸವಣ್ಣನವರನ್ನು ಸ್ಮರಿಸಿದ್ದಾರೆ. ಇದೀಗ ಪಕ್ಕದ ರಾಜ್ಯ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಸವಣ್ಣನವರನ್ನು ವಚನದ ಮೂಲಕ ಸ್ಮರಿಸಿದ್ದಾರೆ. ವಿಶೇಷ ಅಂದ್ರೆ ಕನ್ನಡದಲ್ಲಿ ಟ್ವೀಟ್ ಮಾಡೋ ಮೂಲಕ ಕ್ರಾಂತಿಯೋಗಿಗೆ ನೆರೆ ರಾಜ್ಯದ ಮುಖ್ಯಮಂತ್ರಿಗಳು ನಮನ ಸಲ್ಲಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial