ಬೆಂಗಳೂರು: ಲಾಕ್ ಡೌನ್ ಘೋಷಣೆ ಬಳಿಕ ಸ್ಥಗಿತಗೊಂಡಿದ್ದ ಕರ್ನಾಟಕ ಹೈಕೋರ್ಟ್ ಮತ್ತು ಇತರ ಜಿಲ್ಲಾ ನ್ಯಾಯಾಲಯಗಳ ಕಲಾಪ ಜೂನ್ 1ರಿಂದ ಆರಂಭವಾಗಲಿದೆ. ನ್ಯಾಯಾಲಯ ಕಲಾಪದ ವೇಳೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ 38 ಅಂಶಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ವಕೀಲರು ಮತ್ತು ಸಿಬ್ಬಂದಿಗಳು ಇವುಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲಾ ನ್ಯಾಯಾಲಯಗಳಿಗೆ ಈ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ. ನ್ಯಾಯಾಲಯದ ಕಲಾಪಗಳು ಆರಂಭವಾದ ಬಳಿಕ ಬೆಳಗ್ಗೆ 10 ಮತ್ತು ಮಧ್ಯಾಹ್ನದ ಕಲಾಪದಲ್ಲಿ 10 ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ವಕೀಲರು ಮತ್ತು ನ್ಯಾಯಾಧೀಶರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ.
ಕೋರ್ಟ್ ಕಲಾಪ ಆರಂಭ

Please follow and like us: