ಕೌಟುಂಬಿಕ ಹಿಂಸೆ ಪ್ರಕರಣಗಳಲ್ಲಿ ಏರಿಕೆ

ನವದೆಹಲಿ: ಲಾಕ್‌ಡೌನ್ ಹಿನ್ನಲೆಯಲ್ಲಿ  ಕೌಟುಂಬಿಕ ಹಿಂಸಾಚಾರ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿರುವುದರ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಕೌಟುಂಬಿಕ ಹಿಂಸೆಗೆ ಸಂಬಂಧಿಸಿದ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಹೈಕೋರ್ಟ್ ಆದೇಶ ನೀಡಿದೆ. ಸಹಾಯವಾಣಿ ಮತ್ತು ವಾಟ್ಸಾಪ್ ಸಂಖ್ಯೆಗಳ ಮೂಲಕ ಸಂತಸ್ತçರಿಗೆ ಶೀಘ್ರವಾಗಿ ದೂರು ನೀಡಲು ಸಹಾಯವಾಗಬೇಕು. ಈನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ದೆಹಲಿ ಮುಖ್ಯ ನ್ಯಾಯಾಲಯ ಆದೇಶಿಸಿದೆ. ಕೌಟುಂಬಿಕ ಹಿಂಸೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಒಳಗಾದವರನ್ನು ರಕ್ಷಿಸುವಂತೆ ಕೋರಿ ಎನ್‌ಜಿಒ ಒಂದು ಸಲ್ಲಿಸಿದ ಮನವಿಯನ್ನು ಪರಿಗಣಿಸಿ, ನ್ಯಾಯಾಲಯ ವಿಚಾರಣೆ ನಡೆಸಿ  ಎಂದು ಹೇಳಿದೆ.

Please follow and like us:

Leave a Reply

Your email address will not be published. Required fields are marked *

Next Post

ಕಾನ್ಪುರದಲ್ಲಿನ 56 ವಿದ್ಯಾರ್ಥಿಗಳಿಗೆ ಕೊರೋನಾ

Mon Apr 27 , 2020
ಕಾನ್ಪುರ: ತಬ್ಲಿಘಿ ಸಮಾವೇಶದಿಂದ ಕೊರೋನಾ ವೈರಸ್ ಹರಡುತ್ತಿರುವ ಪ್ರಕರಣಗಳು ಕೊಂಚ ಕಡಿಮೆಯಾಗುತ್ತಿದೆ ಎನ್ನುವಷ್ಟರಲ್ಲಿ ಮತ್ತೆ ಸದ್ದು ಮಾಡುತ್ತಿವೆ. ಉತ್ತರ ಪ್ರದೇಶದ ಕಾನ್ಪುರದಲ್ಲಿನ ಮೂರು ಮದರಸಾಗಳ ಒಟ್ಟು 56 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಇದಕ್ಕೆ ತಬ್ಲಿಘಿಯೇ ಕಾರಣ ಎನ್ನಲಾಗಿದೆ.ಕಾನ್ಪುರದಲ್ಲಿ ತಬ್ಲಿಘಿ​ ಜಮಾತ್​ನಲ್ಲಿ ಪಾಲ್ಗೊಂಡು ಬಂದ ಕೆಲವರಿಗೆ ಕೊರೊನಾ ಪಾಸಿಟಿವ್​ ಬಂದಿತ್ತು. ಅವರೊಂದಿಗೆ ವಿದ್ಯಾರ್ಥಿಗಳು ಸಂಪರ್ಕ ಬೆಳೆಸಿದ್ದರಿಂದ ಸೋಂಕು ಒಬ್ಬರಿಂದೊಬ್ಬರಿಗೆ ಹರಡಿ 56 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಸೊಂಕಿತರು ಕಾನ್ಪುರದ […]

Advertisement

Wordpress Social Share Plugin powered by Ultimatelysocial