ಪ್ರತಿನಿತ್ಯ ಕೊರೊನಾ ಸೋಂಕಿತರ ಆರೋಗ್ಯ ಕಾಪಾಡುವಲ್ಲಿ ಕೊರೊನಾ ವಾರಿಯರ್ಸ್ ಗೆ ಕ್ರಿಕೆಟರ್ ಕೆ.ಎಲ್. ರಾಹುಲ್ ಪೂಮಾ ಶೂಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಅನೇಕ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಹಲವಾರು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಪ್ರತಿನಿತ್ಯ ಕೊರೊನಾ ಸೋಂಕಿತರ ಆರೋಗ್ಯ ಕಾಪಾಡುವಲ್ಲಿ ಕೊರೊನಾ ವಾರಿಯರ್ಸ್ ಶ್ರಮ ಪಡುತ್ತಿದ್ದಾರೆ. ಪ್ರತಿನಿತ್ಯ ವೈದ್ಯರು, ನರ್ಸ್‌ಗಳು, ಪೊಲೀಸರು ಸೇರಿದಂತೆ ಹಲವಾರು ಮಂದಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಇವರ ಕೆಲಸ ನಿಜಕ್ಕೂ ಶ್ಲಾಘನೀಯ. ಇವರ ಕೆಲಸಕ್ಕೆ ಎಷ್ಟು ಹೊಗಳಿಕೆ ನೀಡಿದರು ಸಾಲದು. ಇವರ ಈ ಕೆಲಸಕ್ಕೆ ಏನಾದರೂ ಕೊಡುಗೆ ನೀಡಬೇಕು. ಅವರನ್ನು ಬೆಂಬಲಿಸಬೇಕು ಎಂಬ ನಿಟ್ಟಿನಲ್ಲಿ ಕ್ರಿಕೆಟರ್ ಕೆ.ಎಲ್. ರಾಹುಲ್ ಬೆಂಗಳೂರಿನಲ್ಲಿರುವ ಕೊರೊನಾ ವಾರಿಯರ್ಸ್ ಅಂದರೆ ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಪೂಮಾ ಶೂಗಳನ್ನು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೊರೊನಾ ವಾರಿಯರ್ಸ್ ಕೆಲಸ ನಿಜಕ್ಕೂ ಶ್ಲಾಘನೀಯವೇ ಸರಿ. ಇವರ ಕೆಲಸಕ್ಕೆ ಎಷ್ಟು ಹೊಗಳಿದರೂ ಸಾಲದು ಎಂದು ಹೇಳಿದ್ದಾರೆ.
ಕ್ರಿಕೆಟರ್ ನಿಂದ ಕೊರೊನಾ ವಾರಿಯರ್ಸ್ ಗೆ ಕೊಡುಗೆ

Please follow and like us: