ಉಡುಪಿ: ಒಂದು ಕಡೆ ಉಡುಪಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೇ ವೇಳೆ ಇನ್ನೊಂದೆಡೆ ಕ್ವಾರಂಟೈನ್ ಕೇಂದ್ರದಲ್ಲೇ ಸ್ಥಳೀಯ ಜನಪ್ರತಿನಿಧಿಗಳು ಬರ್ತ್ ಡೇ ಪಾರ್ಟಿ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬಂದ ಅನೇಕರಿಗೆ ಸೋಂಕು ತಗಲುತ್ತಿರುವ ಈ ಹೊತ್ತಿನಲ್ಲಿ, ಅವರು ಕ್ವಾರಂಟೈನ್ ಆಗಿರುವ ಕೇಂದ್ರದಲ್ಲಿ ಹುಟ್ಟು ಹಬ್ಬ ಆಚರಣೆ ನಡೆದಿದ್ದು ಪ್ರಜ್ಞಾವಂತರ ಅಸಮಾಧಾನಕ್ಕೆ ಕಾರಣವಾಗಿದೆ.ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲಮಾದ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದುದು ಗಮನಾರ್ಹ ಸಂಗತಿ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ
ಕ್ವಾರಂಟೈನ್ ನಲ್ಲಿ ಬರ್ತ್ ಡೇ ಪಾರ್ಟಿ

Please follow and like us: