ನವದೆಹಲಿ: ದೇಶದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ಪಟ್ಟಿ ನೀಡಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೊಟ್ಟಿದೆ. ವಕೀಲ ಸಚಿವನ್ ಜೈನ್ ಎನ್ನುವವರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ರೋಗಿಗಳಿಗೆ ಉಚಿತ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ನೇತೃತ್ವದ ತ್ರಿ ಸದಸ್ಯ ಪೀಠ, ಕೋವಿಡ್ 19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ, ಎಲ್ಲೆಲ್ಲಿ ಚಿಕಿತ್ಸೆ ಲಭ್ಯವಿದೆ ಎಂಬ ಮಾಹಿತಿ ನೀಡಲು ನಿರ್ದೇಶನ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹೆಚ್ಚಿನ ದರ ವಿಧಿಸಲಾಗುತ್ತಿದೆ ಮತ್ತು ಹಲವು ವಿಮಾ ಕಂಪೆನಿಗಳು ಕೋವಿಡ್ಗೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಖಾಸಗಿ ಆಸ್ಪತ್ರೆಗಳ ಪಟ್ಟಿ ನೀಡಿ : ಸುಪ್ರೀಂ ಕೋರ್ಟ್

Please follow and like us: