ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ…!

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ಗ್ರಾಮ ಪಮಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಬೇಕೊ ಅಥವಾ ಆಡಳಿತ ಸಮಿತಿ ರಚಿಸಬೇಕೋ ಎಂಬ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಭಾರತಕ್ಕೆ ಸಾಲ ನೀಡಲು ಯುಎಸ್ ಹಣಕಾಸು ಸಂಸ್ಥೆ ನಿರ್ಧಾರ

Wed May 6 , 2020
ವಾಷಿಂಗ್ಟನ್: ಭಾರತದಲ್ಲಿ ಕಡಿಮೆ ಆದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಶಾಲೆಗಳಿಗೆ ನಿರ್ಣಾಯಕ ಹಣಕಾಸು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸಲು ಆರಂಭಿಕ ಹಂತದಲ್ಲಿರುವ ಭಾರತದ ಶಿಕ್ಷಣ ಸಂಸ್ಥೆಗಳಿಗೆ ೧೫ ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಅಮೆರಿಕ ಹಣಕಾಸು ಸಂಸ್ಥೆ ಒಪ್ಪಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ದೀರ್ಘಕಾಲೀನ ಬಂಡವಾಳದ ಅಗತ್ಯವನ್ನು ಪೂರೈಸುವ ಮೂಲಕ ಹೆಚ್ಚಿನ ಶಾಲೆಗಳನ್ನು ತಲುಪಲು ಬೆಂಗಳೂರು ಮೂಲದ ‘ವರ್ತನಾ’ ಹಣಕಾಸು ಸಂಸ್ಥೆಗೆ ಹಣಕಾಸಿನ ನೆರವು ನೀಡುತ್ತದೆ ಎಂದು […]

Advertisement

Wordpress Social Share Plugin powered by Ultimatelysocial