ಚೀನಾದಿಂದ ನಿರ್ಗಮಿತ ಬಹುರಾಷ್ಟ್ರೀಯ ಕಂಪನಿಗಳು ಭಾರತದತ್ತ

ನವದೆಹಲಿ:ದೇಶವನ್ನು ಕಾಡುತ್ತಿರುವ ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಅನೇಕ ಮಾರ್ಗೋಪಾಯಗಳನ್ನು ಅನುಷ್ಠಾನಗೊಳಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಭಾರತದಲ್ಲಿ ಬಂಡವಾಳ ಹೂಡುವ ವಿದೇಶಿ ಸಂಸ್ಥೆಗಳಿಗೆ ರತ್ನಗಂಬಳಿ ಸ್ವಾಗತ ನೀಡಲು ಪೂರಕವಾದ ವಾತಾವರಣ ನಿರ್ಮಿಸುವಂತೆ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ,ಹಣಕಾಸು ಮತ್ತು ವಾಣಿಜ್ಯ ಇಲಾಖೆ ಸಚಿವರು ಮತ್ತು ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಕೊಡುಗೆ ನೀಡಿ ಅಪಾರ ಸಾವುನೋವಿಗೆ ಕಾರಣವಾಗಿರುವ ಚೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳು ಕಮ್ಯುನಿಸ್ಟ್ ರಾಷ್ಟ್ರದಿಂದ ತನ್ನ ಕಂಪನಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ. ಇದರ ಸದಾವಕಾಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಚತುರ ನಡೆ ಅನುಸರಿಸಿದ್ದಾರೆ. ಚೀನಾದಿಂದ ನಿರ್ಗಮಿತ ಬಹುರಾಷ್ಟ್ರೀಯ ಸಂಸ್ಥೆಗಳನ್ನು ಭಾರತದತ್ತ ಆಕರ್ಷಿಸಿ ಇಲ್ಲಿ ಬಂಡವಾಳ ಹೂಡಲು ಪೂರಕವಾದ ವಾತಾವರಣ ಸೃಷ್ಟಿಸುತ್ತಿದ್ದಾರೆ.
ಇದೇ ವೇಳೆ ಅನೇಕ ದೇಶಗಳು ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದ್ದು, ಇದರ ಪ್ರಯೋಜನವನ್ನು ಪಡೆಯುವ ನಿಟ್ಟಿನಲ್ಲಿ ಮೋದಿ ಸಂಪುಟದ ಹಿರಿಯ ಸಚಿವರೊಂದಿಗೆ ಇಂದು ಬೆಳಗ್ಗೆ ಮಹತ್ವದ ಸಮಾಲೋಚನೆ ನಡೆಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ಮಾಡಿದ್ದಾರೆ. ಕೊರೊನಾ ಬಿಕ್ಕಟ್ಟಿನಿಂದಾಗಿ ದೇಶದ ಸ್ವಾವಲಂಬನೆ ಸಾಕಷ್ಟು ಸುಧಾರಣೆಯಾಗಿದ್ದು, ಇದನ್ನು ಮುಂದುವರೆಸುವ ನಿಟ್ಟಿನಲ್ಲಿ ಮತ್ತು ಮೇಕ್‌ಇನ್ ಇಂಡಿಯಾ ಮತ್ತಷ್ಟು ವೇಗ ನೀಡಲು ದೇಶದಲ್ಲೇ ಎಲೆಕ್ಟ್ರಾನಿಕ್ ಸೇರಿದಂತೆ ಅಗತ್ಯ ವಸ್ತುಗಳನ್ನು ತಯಾರಿಸಲು ಅವರು ಒಲವು ತೋರಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶೋಯೆಬ್ ಅಖ್ತರ್ ವಿರುದ್ಧ ಮಾನನಷ್ಟ ಮೊಕದ್ದಮೆ

Fri May 1 , 2020
ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೇಬ್ ಅಖ್ತರ್ ಮತ್ತೆ ಸಮಸ್ಯೆಯಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ನ (ಪಿಸಿಬಿ) ಕಾನೂನು ಸಲಹೆಗಾರ ತಫಝುಲ್ ರಿಝ್ವಿ ಅಖ್ತರ್ ವಿರುದ್ಧ ಕ್ರಿಮಿನಲ್ ಕೇಸ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಆಗಾಗ ಕಾಣಿಸಿಕೊಳ್ಳುವ ರಾವಲ್ಪಿಂಡಿ ಎಕ್ಸ್ಪ್ರೆಸ್ ಶೋಯೆಬ್ ಅಖ್ತರ್, ಪ್ರತೀಸಾರಿಯೂ ಏನಾದರೊಂದು ವಿಚಾರ ಮುಂದಿಟ್ಟು ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಯೂಟ್ಯೂಬ್ ಚಾನೆಲ್ ಮೂಲಕ ಅಖ್ತರ್ ಅಸಮಂಜಸ ಕಾಮೆಂಟ್ಗಳನ್ನು ಮಾಡಿದ್ದಾರೆಂದು ಆರೋಪಿಸಿರುವ ರಿಝ್ವಿ ದೂರು ದಾಖಲಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial