ಜಮೀರ್ ಅವರದ್ದು ಸಮಾಜಘಾತುಕ ನಡವಳಿಕೆ

ಮೈಸೂರು : ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣ ಖಂಡನೀಯ. ಘಟನೆ ಕುರಿತು ಬೇಜವಾಬ್ದಾರಿ ತೋರಿದ ಶಾಸಕ ಜಮೀರ್ ಅಹಮದ್ ರನ್ನು ಕಾಂಗ್ರೆಸ್ ಪಕ್ಷವೇ ಹೊರ ಹಾಕಬೇಕೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ ವಿಶ್ವನಾಥ್, ಜಮೀರ್ ಮಾತುಗಳು ಸಾಮಾನ್ಯ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮುಳುವಾಗಿದೆ. ಜಮೀರ್ ಅಹಮದ್ ಖಾನ್ ಅವರದ್ದು ಸಮಾಜಘಾತುಕ ನಡವಳಿಕೆ. ಅಲ್ಪ ಸಂಖ್ಯಾತ ನಾಯಕರೇ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮಾರಕವಾಗುತ್ತಿದ್ದಾರೆ . ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವ ಮೂಲಕ ವ್ಯಸನಿಗಳು ಸಾವನ್ನಪ್ಪುತ್ತಿರುವುದನ್ನು ತಪ್ಪಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಾಳ ಸಂತೆಯಲ್ಲಿ ಮದ್ಯ ಮಾರಾಟ ಆಗುವುದನ್ನು ತಪ್ಪಿಸಬೇಕು. ವಾರದಲ್ಲಿ ಎರಡು ದಿನ ಎಲ್ಲ ವೈನ್ ಶಾಪ್, ಎಂಎಸ್‍ಐಎಲ್ ಮಳಿಗೆಗಳಲ್ಲಿ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕೆಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕರ್ತವ್ಯ ನಿರತ ವೈದ್ಯರಿಗೆ ಸೂಕ್ತ ಭದ್ರತೆ

Wed Apr 22 , 2020
ನವದೆಹಲಿ : ಕರ್ತವ್ಯ ನಿರ್ವಹಣೆ ವೇಳೆ ವೈದ್ಯರಿಗೆ ಸೂಕ್ತ ಭದ್ರತೆ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾರಕ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಗಲಿರುಳು ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ದೇಶದ ವಿವಿಧೆಡೆ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ಘಟನೆಗಳು ವರದಿಯಾಗುತ್ತಲೇ ಇವೆ. ಹೀಗಾಗಿ ವೈದ್ಯರು ಸಾಂಕೇತಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಇಂದು […]

Advertisement

Wordpress Social Share Plugin powered by Ultimatelysocial