ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ: ಅನಿತಾ ಕುಮಾರಸ್ವಾಮಿ

ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ರಾಮನಗರದಲ್ಲಿ ಮಾತನಾಡಿದ ಅವರು, ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕೊರೊನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ . ಡಿಸಿಎಂ ಡಾಕ್ಟರ್ ಅಶ್ವಥ್ ನಾರಾಯಣ ಅವರು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿ ಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಆಡುವುದನ್ನು ಬಿಡಲಿ. ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ಆಋಓಪಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

 

Please follow and like us:

Leave a Reply

Your email address will not be published. Required fields are marked *

Next Post

ಎಲ್ಲರಿಗೂ ಉತ್ತೇಜನ ನೀಡುತ್ತಿರುವ ಬಾಲಕಿ

Fri Apr 24 , 2020
ವಾಷಿಂಗ್ಟನ್: ಕೊರೋನಾ ಲಾಕ್ ಡೌನ್ ಕಾರಣದಿಂದ ಅನೇಕ ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಬಹಳ ನೋವು ಅನುಭವಿಸುತ್ತಿರುತ್ತಾರೆ. ಹೊರಗೆ ಓಡಾಡಲು ಸಾಧ್ಯವಾಗುವುದಿಲ್ಲ, ತಮ್ಮ ಪ್ರೀತಿಪಾತ್ರರನ್ನು ನೋಡಲು ಆಗುವುದಿಲ್ಲ ಎಂದು ನೊಂದುಕೊಳ್ಳುತ್ತಿರುವರಿಗೆ ಖುಷಿಪಡಿಸಲು ಪಝಲ್, ಕಲರ್ ಪುಸ್ತಕ, ಕಲರ್ ಪೆನ್ಸಿಲ್ ಗಳನ್ನು ಪ್ಯಾಕ್ ಮಾಡಿ ಕಳುಹಿಸುತ್ತಿದ್ದಾರೆ ಹಿತಾ ಗುಪ್ತಾ. ಭಾರತೀಯ ಮೂಲದ ೧೫ ವರ್ಷದ ಹಿತಾ ಗುಪ್ತ ಅಮೆರಿಕದಲ್ಲಿ ನರ್ಸಿಂಗ್ ಹೋಂಗಳಲ್ಲಿರುವ ನೂರಾರು ಹಿರಿಯರು ಮತ್ತು ಮಕ್ಕಳಿಗೆ ಗಿಫ್ಟ್ ಪ್ಯಾಕ್ ಮತ್ತು […]

Advertisement

Wordpress Social Share Plugin powered by Ultimatelysocial