ಟಿವಿವಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರದ ಕೃಷ್ಣಪ್ಪ ರವರು ಪ್ರಾಂಶುಪಾಲರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು ಕಳೆದ ಮೂವತ್ತು ವರ್ಷದಿಂದ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೃಷ್ಣಪ್ಪನವರು ಮಾತನಾಡಿ ನಿವೃತ್ತಿ ಅಂಚಿನಲ್ಲಿ ಸಿಕ್ಕಿರುವ ಈ ಹುದ್ದೆ ಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಂಸ್ಥೆಗೆ ಒಳ್ಳೆಯ ಕೀರ್ತಿಯನ್ನು ತರಲು ಶ್ರಮಿಸುತ್ತೆನೆ ಮತ್ತು ಗ್ರಾಮೀಣ ಭಾಗದಲ್ಲಿ ಇಂತಹ ಉತ್ತಮ ಸಂಸ್ಥೆಯನ್ನು ಕಟ್ಟಿದ ಎಲ್ಲರಿಗೂ ಕೃತಜ್ಞತೆ ಸಲಿಸುವ ಮೂಲಕ ಬಡ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದ್ದರು ಈ ಸಂದರ್ಭದಲ್ಲಿ ನಿಕಟ ಪೂರ್ವ ಪ್ರಾಂಶುಪಾಲ ದಾಳಪ್ಪ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಟಿವಿವಿ ಪ್ರಥಮ ದರ್ಜೆ ಕಾಲೇಜು
Please follow and like us: