ಡಿಕೆ ಶಿವಕುಮಾರ್ ಮೀಟಿಂಗ್

ಬೆಂಗಳೂರು.ಏ.20: ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಡಿಕೆ ಶಿವಕುಮಾರ್ ಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ  ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖಂಡರು, ನಾಯಕರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಎನ್ ಎ ಹ್ಯಾರಿಸ್, ಜಮಿರ್ ಅಹಮದ್ ಖಾನ್, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಅಲ್ಪಸಂಖ್ಯಾತ ಮುಖಂಡರು, ನಾಯಕರು ಜೊತೆಗೆ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಿ ಎಂದ ಹೆಚ್ ಡಿಕೆ

Mon Apr 20 , 2020
ಬೆಂಗಳೂರು, ನಗರದ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ […]

Advertisement

Wordpress Social Share Plugin powered by Ultimatelysocial