ತಪ್ಪು ವರದಿ ನೀಡಿದ ನೊಯ್ಡಾ ದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ನೊಯ್ಡಾ: ಗೌತಮ್ ಬುದ್ಧ್ ನಗರದ ಎಂಟು ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದ ಅಲ್ಲಿನ ಕೆಲ ಖಾಸಗಿ ಪ್ರಯೋಗಾಲಯಗಳು ಅವರಿಗೆ ಕೋವಿಡ್-19 ಪಾಸಿಟಿವ್ ಎಂದು ತಪ್ಪಾಗಿ ವರದಿ ನೀಡಿರುವ  ವ್ಯಕ್ತಿಗಳ ಗಂಟಲು ದ್ರವ ಮಾದರಿಗಳನ್ನು ಸರಕಾರಿ ಲ್ಯಾಬ್‍ಗಳಲ್ಲಿ ಪರೀಕ್ಷೆ ನಡೆಸಿದಾಗ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಎಂಟು ಮಂದಿಯನ್ನು ಇದೀಗ ಅವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ತಪ್ಪು ವರದಿ ನೀಡಿದ್ದ  ಖಾಸಗಿ ಲ್ಯಾಬ್‍ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಖಾಸಗಿ ಲ್ಯಾಬ್‍ಗಳು ನೀಡುವ ವರದಿಗಳು ಶಂಕಾಸ್ಪದವಾಗಿದ್ದರೆ ಅವುಗಳನ್ನು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಬಯಲಾಜಿಕಲ್ಸ್ ಸಹಿತ ಗವರ್ನ್‍ಮೆಂಟ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಇಲ್ಲಿ ಪರಿಶೀಲಿಸಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

Sat May 30 , 2020
ರಾಮನಗರ: ರಾಮನಗರದ ಜಾನಪದ ಲೋಕವು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ರಾಮನಗರ ಜಿಲ್ಲೆಯ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿದೆ. ಇಂದು ಜಾನಪದ ಲೋಕದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸುಮಾರು 110 ಜನ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿದರು. ರಾಜ್ಯದ ಬೇರೆ ಜಿಲ್ಲೆಗಳ ಜಾನಪದ ಕಲಾವಿದರಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುವುದು ಎಂದು ಜಾನಪದ ಲೋಕ ಅಡಳಿತ ಮಂಡಳಿ ತಿಳಿಸಿದೆ. Please follow […]

Advertisement

Wordpress Social Share Plugin powered by Ultimatelysocial