ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಕೇಜ್ರಿವಾಲ್ ಅವರು ಸ್ವತಃ ಐಸೋಲೇಷನ್ ನಲ್ಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನದ ವೇಳೆ ಕೇಜ್ರಿವಾಲ್ ಅವರಲ್ಲಿ ಜ್ವರ, ಗಂಟಲು ಕೆರೆತದಂತಹ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿ, ಐಸೋಲೇಷನ್ ನಲ್ಲಿದ್ದಾರೆಂದು ತಿಳಿದು ಬಂದಿದೆ. ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ನಾಳೆ ಕೇಜ್ರಿವಾಲ್ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯ ಮಂತ್ರಿಗೆ ಕೊರೊನಾ ಲಕ್ಷಣಗಳು

Please follow and like us: