ಬೆಂಗಳೂರು: ನಾಲ್ಕನೇ ಹಂತದ ಲಾಕ್‌ಡೌನ್ ಮುಗಿದ ಮೇಲೆ ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳಿಗೂ ಬಾಗಿಲು ತೆರೆಯಲು ಅವಕಾಶ ಕೊಡಲಾಗುತ್ತದೆ. ಆದರೆ ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕುಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ನಡೆದ ಪಂಡಿತ್ ಜವಹರಲಾಲ್ ನೆಹರೂ ಅವರ 56 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇರುವ ನೆಹರು ಅವರ ಪ್ರತಿಮೆಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ದೇವಸ್ಥಾನಗಳನ್ನು ತೆರೆದರೆ ಮಸೀದಿ, ಚರ್ಚ್‌ಗಳನ್ನೂ ತೆರೆಯಲಾಗುತ್ತದೆ. ಕೇಂದ್ರ ಸರ್ಕಾರಕ್ಕೆ ಮೇ.26 ರಂದು ಈ ಬಗ್ಗೆ ಪತ್ರ ಬರೆಯಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ತೆರೆಯುವುದು ಸೇರಿ ಹಲವು ಚಟುವಟಿಕೆಗಳಿಗೆ ಅವಕಾಶ ಕೇಳಿದ್ದೇವೆ. ಕೇಂದ್ರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಹೇಳಿದರು.
ಧಾರ್ಮಿಕ ಕೇಂದ್ರಗಳ ಮರು ಆರಂಭ

Please follow and like us: