ನಕಲಿ ಬ್ರಾಂಡ್ ಬಟ್ಟೆ ಮಾರುತ್ತಿದ್ದವನ ಬಂಧನ   

ವೈಟ್‍ಫೀಲ್ಡ್‍ನ ಶ್ರೀರಾಮ ದೇವಸ್ಥಾನದ ರಸ್ತೆಯಲ್ಲಿರುವ ರೆಡ್‍ಕೋಟ್ ಶಾಪ್ ನ ಮಾಲಿಕ ಅವಿನಾಶ್ ಎಂಬಾತ ಪ್ರತಿಷ್ಠಿತ ಕಂಪೆನಿಗಳಾದ ಝರಾ, ಬರ್ಬೇರಿ, ನೈಕ್, ಯುಎಸ್ ಪೋಲೊ, ಅಡಿದಾಸ್ ಹಾಗೂ ಜಿಯುಸಿಸಿಐ ಮತ್ತಿತರ ಸಂಸ್ಥೆಗಳ ನಕಲಿ ಬಟ್ಟೆಗಳನ್ನು ದಾಸ್ತಾನು ಮಾಡಿಕೊಂಡು ಕಾಪಿರೈಟ್ಸ್ ಉಲ್ಲಂಘಿಸಿ ಅಸಲಿ ಬಟ್ಟೆಗಳೆಂದು ಮಾರಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 25 ಲಕ್ಷ ರೂ. ಮೌಲ್ಯದ 1100 ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡು ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ , ಉದ್ಯೋಗದ ಅವಕಾಶಕ್ಕೆ ಸುಪ್ರೀಂ ಕೋರ್ಟ್ ಅಸ್ತು

Sat Jun 6 , 2020
ನವದೆಹಲಿ: ಸುಪ್ರೀಂ ಕೋರ್ಟ್ ವಲಸೆ ಕಾರ್ಮಿಕರ ಕುರಿತಂತೆ ಮಹತ್ವದ ಸೂಚನೆ ನೀಡಿದೆ. ವಲಸೆ ಕಾರ್ಮಿಕರನ್ನು ೧೫ ದಿನದೊಳಗೆ ಅವರ ಊರಿಗೆ ವಾಪಸ್ ಕಳುಹಿಸಲು ಎಲ್ಲ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ತಮ್ಮ ತವರು ರಾಜ್ಯಗಳಿಗೆ ಹಿಂದಿರುಗುವ ಕಾರ್ಮಿಕರಿಗೆ ಅಲ್ಲಿಯೇ ಉದ್ಯೋಗದ ಅವಕಾಶ ಕಲ್ಪಿಸಲು ಅಲ್ಲಿನ ಸರ್ಕಾರಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದೆ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ […]

Advertisement

Wordpress Social Share Plugin powered by Ultimatelysocial