ಬೀದರ: ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಹಾಗೂ ಹೋಕ್ರಾಣಾ ಗ್ರಾಮ ಪಂಚಾಯತ್‌ಗಳಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಿಸಿದರು . ಕೂಲಿ ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಾಗಬಾರದೆಂಬ ಉದ್ದೇಶದಿಂದ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಕೆಲಸ ನಿಡಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಲು ಸೂಚಿಸಿದರು. ಕೊರೊನಾ ಮಹಾಮಾರಿ ರೋಗ ಹೆಚ್ಚುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸೂಚಿಸಿದರು. ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.
ನರೇಗಾ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ

Please follow and like us: