ನಾನ್ ಕೋವಿಡ್ ಆಸ್ಪತ್ರೆಗಳಿಗೂ ಪಿಪಿಇ ಕಿಟ್ :ಶ್ರೀ ರಾಮುಲು

ನಾನ್ ಕೋವಿಡ್ ಆಸ್ಪತ್ರೆಗಳಿಗೂ ಪಿಪಿಇ ಕಿಟ್ ಗಳನ್ನು ಒದಗಿಸುತ್ತೇವೆ ಎಂದು ಸಚಿವ ಶ್ರೀ ರಾಮುಲು   ಹೇಳಿದ್ದಾರೆ. ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಗರ್ಭಿಣಿಯೊಬ್ಬರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದ ಕಾರಣ ವಾಣಿವಿಲಾಸ ಆಸ್ಪತ್ರೆಯ ಸಿಬ್ಬಂದಿಯಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಲ್ಲಿ ಪಿಪಿಇ ಕಿಟ್ ಇರಲಿಲ್ಲ ಎಂಬುದು ಸತ್ಯ. ಇದರಿಂದಾಗಿ ಆತಂಕ ಮನೆಮಾಡಿತ್ತು. ಈಗ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಿದ್ದೇವೆ. ಪಾಸಿಟಿವ್ ಬಂದ ಗರ್ಭಿಣಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಈ ಬಗ್ಗೆ ಟಾಸ್ಕ್ ಪೋರ್ಸ್ ಸಭೆಯಲ್ಲಿಯೂ ಚರ್ಚೆ ಮಾಡಿದ್ದೇವೆ. ವೈದ್ಯರು, ನರ್ಸ್​ಗಳು, ವೈದ್ಯ ವಿದ್ಯಾರ್ಥಿಗಳು ಯಾರೂ ಗಾಬರಿ ಪಡಬೇಕಿಲ್ಲ. ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್  ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

೧೨ ಲಕ್ಷ ಕೋಟಿ ಸಾಲ ಮಾಡಲಿದೆಯಾ ಭಾರತ..

Sat May 9 , 2020
ಕೊರೊನಾ ವೈರಸ್ ಅಟ್ಟಹಾಸದಿಂದ ಸಾಕಷ್ಟು ದೇಶಗಳ ಆರ್ಥಿಕತೆ ಮೇಲೆ ಭಾರಿ ಹೊಡೆತ ಬಿದ್ದಿದೆ. ಭಾರತ ಕೂಡ ಇದಕ್ಕೆ ಹೊರತಾಗಿಲ್ಲ. ಕೊರೊನಾ ಸಂಕಷ್ಟದ ಆರ್ಥಿಕತೆ ಮೇಲೆತ್ತಲು ಕೇಂದ್ರ ಸರ್ಕಾರ ಈ ವರ್ಷ ೧೨ಲಕ್ಷ ಕೋಟಿ ರೂಪಾಯಿ ಸಾಲ ಪಡೆಯುವ ಅಗತ್ಯ ಬಿಳಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಲಾಕ್‌ಡೌನ್‌ನಿಂದ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿದ್ದು, ತೆರಿಗೆ ಸಂಗ್ರಹ ಸೇರಿದಂತೆ ಎಲ್ಲ ಆದಾಯ ಮೂಲಕ್ಕೂ ಹೊಡೆತ ಬಿದ್ದಿದೆ. ಹೀಗಾಗಿ ಕೇಂದ್ರ ಸರ್ಕಾರ ಪ್ರಸ್ತುತ […]

Advertisement

Wordpress Social Share Plugin powered by Ultimatelysocial