ಬೆಂಗಳೂರು: ಪಡಿತರ ಚೀಟಿ ಇಲ್ಲದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದಿನಿAದ ಮೇ ೩೦ ರ ವರೆಗೆ ಪಡಿತರ ಚೀಟಿ ಇಲ್ಲವರಿಗೂ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ. ಆಹಾರ ಸಚಿವ ಕೆ. ಗೋಪಾಲಯ್ಯ ಇಂದು ಪಡಿತರ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಬಳಿಕ ಮಾತನಾಡಿದ ಅವರು ಪ್ರತಿ ಒಬ್ಬ ವ್ಯಕ್ತಿಗೆ ೫ ಕೆ.ಜಿ. ಅಕ್ಕಿ, ಎರಡು ಕೆ.ಜಿ ಬೇಳೆ ವಿತರಿಸಲಾಗುತ್ತಿದೆ ಎಂದಿದ್ದಾರೆ. ಅಲ್ಲದೇ ಪಡಿತರ ಚೀಟಿ ಇಲ್ಲದ ರಾಜ್ಯ ಹಾಗೂ ಹೊರ ರಾಜ್ಯದ ಕಾರ್ಮಿಕರು, ಅಂತರ್ ಜಿಲ್ಲೆಯವರು ಆಧಾರ್ ಕಾರ್ಡ್ ತೋರಿಸಿ ಜೂನ್ ೧೦ ರ ವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಮತ್ತು ಬೇಳೆ ತೆಗೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.
ಪಡಿತರ ಚೀಟಿ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

Please follow and like us: