ಬೆಂಗಳೂರು: ತಳವಾರ, ಪರಿವಾರ ಮತ್ತು ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಅನುಸಾರ ರಾಜ್ಯದಲ್ಲಿಯೂ ಅಧಿಸೂಚನೆ ಹೊರಡಿಸಲು ಆದೇಶ ನೀಡಲಾಗಿದೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಕುರಿತು ಮಾಹಿತಿ ನೀಡಿ, ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿರುವ ಸಿದ್ದಿ ಸಮುದಾಯದವರನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಅನ್ವಯ ರಾಜ್ಯದಲ್ಲಿ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.ಹಲವು ವರ್ಷಗಳಿಂದ ಬೇಡಿಕೆ ಇದ್ದು, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರಕಾರಕ್ಕೆ ಎಲ್ಲಾ ಪೂರಕ ಮಾಹಿತಿಯನ್ನು ಸಲ್ಲಿಸಲಾಗಿತ್ತು. ಪ್ರಸ್ತಾವನೆಯನ್ನು ಸಂಸತ್ ನಲ್ಲಿ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದ್ದು ಇದರ ಆಧಾರದಲ್ಲಿ ರಾಜ್ಯ ಸರ್ಕಾರ ತಳವಾರ, ಪರಿವಾರ ಮತ್ತು ಸಿದ್ಧಿ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡಲು ಅವಕಾಶ

Please follow and like us: