ಪಾದರಾಯನಪುರದಲ್ಲಿ 59 ಮಂದಿಯನ್ನು ಬಂಧಿಸಿದ್ದೇವೆ : ಬೊಮ್ಮಾಯಿ

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 59 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಘಟನೆ ನಡೆದ ಮೂರು -ನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು, ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಎಂ ಸೂಚನೆ ಹಿನ್ನಲೆಯಲ್ಲಿ ಇನ್ನೂ ಹೆಚ್ಚಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದು  ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಗೂಂಡಾ ಪ್ರವೃತ್ತಿ ಸಹಿಸಲ್ಲ ಎಂದ ಸಿಎಂ ಬಿಎಸ್ ವೈ

Mon Apr 20 , 2020
ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ೫೪ ಜನರನ್ನು ಇದುವರೆಗೆ ಬಂಧಿಸಲಾಗಿದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಲೂರಿನಲ್ಲಿ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ.‌ ಶೀಘ್ರದಲ್ಲೇ ‌ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು.ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. […]

Advertisement

Wordpress Social Share Plugin powered by Ultimatelysocial