ಪಾದರಾಯನಪುರ ಮತ್ತೆ ಕಂಪ್ಲೀಟ್ ಕ್ಲೋಸ್

ಬೆಂಗಳೂರು : ಪಾದರಾಯನಪುರದಲ್ಲಿ ಮಾರಕ ಕೊರೊನಾ ಸೋಂಕು ಮತ್ತಷ್ಟು ಆತಂಕ ತಂದೊಡ್ಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾದಿಂದ ಮತ್ತೇ ೩ ಕೇಸ್‌ಗಳು ಪತ್ತೆಯಾಗಿವೆ. ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಮತ್ತಷ್ಟು ಭೀತಿ ಎದುರಾಗಿದೆ.
ಪಾದರಾಯನಪುರದಲ್ಲಿ ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲು ತೆರಳಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಇಲ್ಲಿನ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨೦ಕ್ಕೂ ಹೆಚ್ಚು ಜನರನ್ನು ಬಂಧಿಸಿ ರಾಮನಗರ ಜೈಲಿನಲ್ಲಿ ಇಡಲಾಗಿತ್ತು. ಆದರೆ, ಬಂಧಿತರಲ್ಲೂ ಕೆಲವರಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ಅವರನ್ನು ಮತ್ತೆ ಬೆಂಗಳೂರಿನ ಹಜ್ ಭವನಕ್ಕೆ ಸ್ಥಳಾಂತರಿಸಲಾಗಿತ್ತು. ಇದೇ ವೇಳೆ, ಪಾದರಾಯನಪುರವನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಪಾದರಾಯನಪುರದಲ್ಲಿ ಸೋಂಕು ಪತ್ತೆಯಾಗಿರಲಿಲ್ಲ. ಸದ್ಯ ಈಗ ಮತ್ತೆ ಪಾದರಾಯನಪುರದಲ್ಲೇ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿನ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಂಟೇನ್ಮೆಂಟ್ ಜೋನ್ ಆಗಿದ್ದ ಪಾದರಾಯನಪುರ ಮತ್ತೆ ಕಂಪ್ಲೀಟ್ ಸೀಲ್‌ಡೌನ್ ಆಗಿದೆ. ಯ್ರಾಡಂಮ್ ಟೆಸ್ಟ್ ಮಾಡುವಂತೆ ಬಿಬಿಎಂಪಿನಿಂದ ನಿರ್ಧಾರ ಮಾಡಲಾಗಿತ್ತು. ೪೬ ಜನರ ರ‍್ಯಾಡಂಮ್ ಟೆಸ್ಟ್ ಮಾಡಲು ಸ್ಯಾಪಂಲ್ ತೆಗೆದುಕೊಂಡು ಹೋಗಲಾಗಿತ್ತು. ಇದರಿಂದ ಮೂವರಿಗೆ ಕೊರೊನಾ ಪಾಸಿಟಿವ್ ಇರುವುದು ಕಂಡು ಬಂದಿದೆ. ರ‍್ಯಾಡಂಮ್ ಟೆಸ್ಟ್ ವೇಳೆ ೩೪ ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಕಂಡು ಬಂದಿದೆ. ಪಾದರಾಯನಪುರದ ೯ ತಿಂಗಳ ಗರ್ಭೀಣಿಗೆ ಕೊರೊನಾ ಇರುವ ಶಂಕೆ ಕಂಡು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ರೈಲ್ವೆ ಸಚಿವರಿಗೆ ಸಂಸದ, ಭಾಜಪಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ

Fri May 8 , 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದ ಕಾರ್ಮಿಕರಿಗೆ ಅವರ ಊರಿಗೆ ತೆರಳಲು ಅನುಕೂಲವಾಗುವಂತೆ ಮಂಗಳೂರು ರೈಲು ನಿಲ್ದಾಣದಿಂದ ರೈಲಿನ ವ್ಯವಸ್ಥೆ ಮಾಡಬೇಕೆಂದು ದಕ್ಷಿಣ ಕನ್ನಡ ಸಂಸದರೂ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವರಾದ ಸನ್ಮಾನ್ಯ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರೈಲ್ವೆ ಸಹಾಯಕ ಸಚಿವರಾದ ಸನ್ಮಾನ್ಯ ಸುರೇಶ್ ಅಂಗಡಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.ಸುಮಾರು 3500 ಹೊರರಾಜ್ಯದ ಕಾರ್ಮಿಕರು […]

Advertisement

Wordpress Social Share Plugin powered by Ultimatelysocial