ಬೆಂಗಳೂರು: ಪಿ.ಯು.ಸಿ ಮಟ್ಟದಿಂದಲೇ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಸಿಎಂ ಯಡಿಯೂರಪ್ಪ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ಆನ್ ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ, ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿ.ಯು ಮಟ್ಟದಿಂದಲೇ ಆರಂಭಿಸಲು ಕ್ರಮಕೈಗೊಳ್ಳುವಂತೆ ಹೇಳಿದರು. ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕೆಂದು ತಿಳಿಸಿದರು. ಲಾಕಡೌನ್ ಪೂರ್ವದಲ್ಲಿ ಶೇ.೭೯ ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ ೩೧ರೊಳಗೆ ಇನ್ನುಳಿದ ಪಠ್ಯಕ್ರಮವನ್ನು ಆನ್ಲೈನ್ ಬೋಧನೆ ಮೂಲಕ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಪಿಯು ಮಟ್ಟದಲ್ಲೇ ಆನ್ಲೈನ್ ಕ್ಲಾಸ್ ಆರಂಭಿಸಿ : ಯಡಿಯೂರಪ್ಪ

Please follow and like us: