ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡ ಫಲಾನುಭವಿಗಳಿಗೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲ ನೀಡಿದ ಘಟನೆ ದೇವದುರ್ಗದಲ್ಲಿ ನಡೆದಿದೆ. ಇಲ್ಲಿನ ಹೆಚ್ ಸಿದ್ದಾಪುರ ಗಾಮದ ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಾಣಿಸಿಕೊಂಡ ಫಲಾನುಭವಿಗಳಿಗೆ ರಕ್ಷಣೆ ನೀಡಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಿ ಎಸ್ ಐ ವಿರೂಪಾಕ್ಷ ಅವರಿಗೆ ಮನವಿ ನೀಡಿದ್ದಾರೆ. ಅವರ ಶೆಡ್ ಗಳನ್ನ ತೆರವುಗೊಳಿಸಲು ಸ್ಥಳೀಯ ಅಧಿಕಾರಿಗಳು ಮುಂದಾಗಿದ್ದು, ಗ್ರಾಮಕ್ಕೆ ಶಾಲಾ ಕಟ್ಟಡ ಮಂಜೂರಾಗಿದೆ ಎಂದು ಅಲ್ಲಿ ವಾಸಿಸುತ್ತಿರುವ ಜನರನ್ನ ಎತ್ತಂಗಡಿ ಮಾಡಿಸಲು ತಯಾರಾಗಿದ್ದಾರೆ. ಗುತ್ತಿಗೆದಾರರು ಮತ್ತು ಕೆಲವು ವ್ಯಕ್ತಿಗಳು ಜಾಗವನ್ನು ಖಾಲಿ ಮಾಡಿ ಎಂದು ಬೆದರಿಕೆ ಹಾಕಿ, ಕಿರುಕುಳ ನೀಡುತ್ತಿದ್ದಾರೆ. ಇದರ ಜೊತೆಗೆ ಅವ್ಯಾಚ ಶಬ್ದಗಳಿಂದ ಫಲಾನುಭವಿಗಳಿಗೆ ನಿಂದಿಸಿದ್ದಾರೆ . ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯ ಜನರ ರಕ್ಷಣೆಗೆ ಮುಂದಾಗಬೇಕು. ಅವರಿಗೆ ಸೂಕ್ತವಾದ ರಕ್ಷಣೆ ನೀಡಬೇಕು. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಾದ್ಯಂತ ಹೋರಾಟ ಮಾಡುತ್ತೆ ಎಂದು ಮನವಿ ಪತ್ರ ಮೂಲಕ ಎಚ್ಚರಿಕೆ ಕೊಟ್ಟಿದ್ದಾರೆ.
ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡ ಫಲಾನುಭವಿಗಳು

Please follow and like us: