ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ ೪ರ ಮೇಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾಷ್ಟಿçÃಯ ಹೆದ್ದಾರಿ ೭೫ರಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಹೋಗುತ್ತಿದ್ದಾಗ ಟ್ರಾö್ಯಕ್ಟರ್‌ಗೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆದ ಕೂಡಲೇ ಮಬೀನಾಗೆ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕರೆದೋಯ್ಯುವ ವೇಳೆ ಮಾರ್ಗಮದ್ಯದಲ್ಲಿಯೇ ಸಾವನ್ನಪ್ಪಿದ್ದು, ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಬೀನಾ ಪ್ಯಾಟೆ ಹುಡ್ಗೀರು ಹಳ್ಳಿ ಲೈಫು ರಿಯಾಲಿಟಿ ಶೋ ೪ರ ವಿನ್ನರ್ ಆಗಿದ್ದರು. ಮಾಡೆಲ್ ಆಗಿಯೂ ಮೆಬೀನಾ ಖ್ಯಾತಿ ಗಳಿಸಿದ್ದರು. ಅಕಾಲಿಕ ಮರಣದಿಂದ ಸಾವನ್ನಪ್ಪಿದ ಮಬೀನಾಗೆ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫ್ ಖ್ಯಾತಿಯ ಮೆಬೀನಾ ಮೈಕೆಲ್ ದುರ್ಮರಣ

Please follow and like us: