ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ಡೌನ್ 5.0 ಘೋಷಣೆ ಮಾಡಿದ ಬೆನ್ನಲ್ಲೇ ಹಲವು ವಿನಾಯಿತಿಗಳನ್ನು ನೀಡಲಾಗಿದೆ.ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ ಆರಂಭಿಸಲಾಗಿದೆ. ನೈಟ್ ಕರ್ಫ್ಯೂ ಅವಧಿಯನ್ನು ಸಡಿಲಗೊಳಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಅಂತೆಯೇ ಕೆಎಸ್‌ಆರ್ಟಿಸಿ ಬಸ್ ಗಳು ರಾತ್ರಿ 9 ಗಂಟೆಯವರೆಗೂ ಸಂಚರಿಸಲಿವೆ. ಸಮಯ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಕಾರ್ಯಾಚರಣೆಯಲ್ಲಿರುತ್ತವೆ. ರಾಜ್ಯದಲ್ಲಿ ಕೆಎಸ್‌ಆರ್ ಟಿಸಿ  ಮತ್ತು ಉಳಿದ ಸಾರಿಗೆ ಬಸ್ ಗಳು ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೆ ಸಂಚರಿಸಲಿವೆ ಎಂದು ಹೇಳಲಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ರೈಲು ಐಸೋಲೇಶನ್ ವಾರ್ಡ್ನಲ್ಲಿ ಕೊರೊನಾ ರೋಗಿಗೆ ಚಿಕಿತ್ಸೆ

Mon Jun 1 , 2020
ದೆಹಲಿ: ಕೊರೊನಾ ವೈರಸ್ ಭೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೈಲು ಭೋಗಿಗಳನ್ನೇ ಐಸೋಲೇಶನ್ ವಾರ್ಡ್‌ಗಳಾಗಿ ಪರಿವರ್ತಿಲಾಗಿತ್ತು. ಇದೀಗ, ದೆಹಲಿಯಲ್ಲಿ ಮೊದಲ ಸಲ ರೈಲು ಐಸೋಲೇಶನ್ ವಾರ್ಡ್ನಲ್ಲಿ ಕೊರೊನಾ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ.ದೆಹಲಿ ಸರ್ಕಾರದ ಮನವಿ ಮೆರೆಗೆ AC ರಹಿತವಾದ 10 ಬೋಗಿಗಳನ್ನು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿಯೋಜಿಸಲಾಗಿದೆ. ಅದರಲ್ಲಿ 160 ಬೆಡ್ ಗಳನ್ನು ಹೊಂದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುಂಚೆ ದೆಹಲಿಯಲ್ಲಿ ಸುಮಾರು 117 ಖಾಸಗಿ […]

Advertisement

Wordpress Social Share Plugin powered by Ultimatelysocial