ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ

ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು  ಸಚಿವ ಆರ್. ಅಶೋಕ್  ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ  ಅವರು , ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 ರ ಅಡಿ ಅರ್ಜಿ ಸಲ್ಲಿಸುವ ಅವಧಿ ಮುಕ್ತಾಯವಾಗಿದೆ. ರೈತರಿಂದ ಅವಧಿ ವಿಸ್ತರಣೆಗೆ ಮನವಿ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು  ಹೇಳಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರ ಎಲ್ಲ ಹಂತದಲ್ಲಿಯೂ ಕೃಷಿಕರ ಜೊತೆ ಇದೆ:ಬಿಸಿ ಪಾಟೀಲ್

Wed May 6 , 2020
ರಾಜ್ಯದ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಸಚಿವ ಬಿ.ಸಿ. ಪಾಟೀಲ್  ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗಳನ್ನು ತಡೆಗಟ್ಟುವ ದಿಶೆಯಲ್ಲಿ ರೈತ.ರಿಗೆ ಆನುಕೂಲಕರವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗಿದೆ. ರಾಜ್ಯ ಸರ್ಕಾರ ಎಲ್ಲ ಹಂತಗಳಲ್ಲಿಯೂ ಕೃಷಿಕರ ಜೊತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳಂತೆ ಐದು ಕಂತುಗಳ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ. […]

Advertisement

Wordpress Social Share Plugin powered by Ultimatelysocial