ಬಡವರಿಗೆ ತಲುಪಬೇಕಾದ ಅಕ್ಕಿ ತಮಿಳುನಾಡಿನ ಪಾಲಾಗುತ್ತಿದೆ:ಡಿ.ಕೆ.ಶಿವಕುಮಾರ್

ಬಡವರಿಗೆ ತಲುಪಬೇಕಾದ ಅಕ್ಕಿ ತಮಿಳುನಾಡಿನ ಪಾಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ  ಅವರು, ಅಕ್ಕಿ ಗೋಲ್‌ಮಾಲ್ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆಯೇ ಇಲ್ಲವೋ ಎಂಬುದು ತಿಳಿದಿಲ್ಲ. ಹರಿಯಾಣದಿಂದ ಬಂದ ಅಕ್ಕಿಯನ್ನು ತಮಿಳುನಾಡಿನ ಹೊಸೂರು ವ್ಯಾಪಾರಿಗೆ ಮಾರಾಟ ಮಾಡಲಾಗಿದೆ. ಇದನ್ನು ಬಿಜೆಪಿಯ ಸಕ್ರಿಯ ನಾಯಕರೇ ವ್ಯಾಪಾರ ಮಾಡಿದ್ದಾರೆ. ಆಹಾರ ಕಾಯಿದೆಗೆ ಒಂದು ನಿಯಮ ಇದೆ. ಕಾನೂನು ಬಾಹಿರವಾಗಿ ಅಕ್ಕಿ ಮಾರಟ ಮಾಡಿದವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಮಂತ್ರಿಯೋರ್ವರ ಕೈವಾಡ ಇದೆ .ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ. ಕೊರೊನಾ ಸೋಂಕು ತಡೆಗೆ ಬೆಂಬಲ ನೀಡುತ್ತೇವೆ. ಸರ್ಕಾರಗಳ ಪಾರದರ್ಶಕ ಎಲ್ಲಾ ಕೆಲಸಕ್ಕೆ ಸಹಕಾರವಿದೆ. ಮುಖ್ಯಮಂತ್ರಿಗಳು ತಮ್ಮ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ವೇಳೆ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವವರ ಬಗ್ಗೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ದಾಖಲೆ ಸಮೇತ ನಾವು ಪತ್ತೆ ಹಚ್ಚಿದ್ದೇವೆ. ಹರಿಯಾಣದ ಅಕ್ಕಿಯನ್ನು ನಾವು ಸೀಜ್ ಮಾಡಿಸಿದ್ದೇವೆ. ಸರ್ಜಾಪುರದ ಗೋಡೌನ್ ನಲ್ಲಿ ಅಕ್ಕಿ ಸಂಗ್ರಹಿಸಿದ್ದಾರೆ. ಸರ್ಕಾರ ಆಹಾರ ಕಾಯಿದೆ ಪ್ರಕಾರ ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿಯೊಂದು ಜಿಲ್ಲೆಯಲ್ಲಿಯೂ ಇದೇ ರೀತಿ ಅಕ್ರಮ ವ್ಯಾಪಾರವಾಗುತ್ತಿದೆ. ಅಕ್ಕಿಯನ್ನು ಪಾಲಿಶ್ ಮಾಡಿ ಅಕ್ರಮವಾಗಿ ಕೆಜಿಗೆ 30-40 ರೂ. ನಂತೆ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ

Fri Apr 24 , 2020
ನವದೆಹಲಿ: ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಹಿನ್ನೆಲೆ, ವಿವಿಧ ಗ್ರಾಮ ಪಂಚಾಯ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಅಂತಾ ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಅಲ್ಲದೇ ಈ ಸಂದರ್ಭದಲ್ಲಿ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇಂದು ದೇಶದ ವಿವಿಧ ಗ್ರಾಮ ಪಂಚಾಯ್ತಿಗಳನ್ನು […]

Advertisement

Wordpress Social Share Plugin powered by Ultimatelysocial