ಬಸವಣ್ಣ ಅವರ ತತ್ವ-ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು

ಬೆಂಗಳೂರು: ಮಾನವತಾವಾದಿ, ಜಗಜ್ಯೋತಿ, ವಿಶ್ವಗುರು ಬಸವಣ್ಣ ಅವರ ತತ್ವ-ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಏಕತೆಯನ್ನು ಸಾಧಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಕರೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸವಣ್ಣ ಅವರು 900 ವರ್ಷಗಳ ಹಿಂದೆ ವರ್ಗ, ವರ್ಣ, ಜಾತಿ, ಧರ್ಮ, ಲಿಂಗಭೇದಗಳಿಂದ ಮುಕ್ತರಾಗಿ ಮಾನವ ಏಕತೆಯನ್ನು ಸಾಧಿಸಬೇಕು ಎನ್ನುವ ಸಂದೇಶವನ್ನು ಸಾರಿದ್ದಾರೆ. ಅದಕ್ಕಾಗಿ ಅಪರಿಮಿತವಾಗಿ ಹೋರಾಟವನ್ನ ಮಾಡಿದ್ದಾರೆ. ಇಡೀ ಪ್ರಪಂಚದ ಯಾವುದೇ ದೇಶದಲ್ಲಿ ದುಡಿಯುವ ವರ್ಗಕ್ಕಾಗಿ, ಕಾಯಕ ಜೀವಿಗಳಿಗಾಗಿ, ನೊಂದವರ ಏಳಿಗೆಗಾಗಿ ಬಸವಣ್ಣ ಅವರ ಆದರ್ಶಗಳು, ಅರ್ಥಪೂರ್ಣವಾದ ಕಾರ್ಯಕ್ರಮಗಳು,ಚಿಂತನೆಗಳು ಇಡೀ ಪ್ರಪಂಚವೇ ಮೆಚ್ಚುವ ಕಾರ್ಯಕ್ರಮಗಳಾಗಿವೆ. ಅಮೇರಿಕಾದ ಸಂಯುಕ್ತ ರಾಷ್ಟ್ರಗಳಲ್ಲಿ ಬಸವಣ್ಣ ಚಿಂತನೆ. ಕಾರ್ಯಕ್ರಮಗಳಲ್ಲಿ 30ಕ್ಕೂ ಹೆಚ್ಚು ವಚನಗಳು ಅಲ್ಲಿನ ಮಾನವ ಹಕ್ಕುಗಳಾಗಿ ರೂಪುಗೊಂಡಿವೆ. ಮಾನವ ಇತರ ಜೀವಿಗಳು ಮತ್ತು ನಿಸರ್ಗ ಪಾಲನೆಯ ತತ್ವವಾದ ಬಸವ ತತ್ವವನ್ನು ಜನ ಅರಿತು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ

Sun Apr 26 , 2020
ಪಾದರಾಯನಪುರದ ಖೈದಿಗಳನ್ನು ಕರೆತಂದು ನೆಮ್ಮದಿಯಾಗಿದ್ದ ರಾಮನಗರಕ್ಕೆ ಕೊರೊನಾ ಸೋಂಕು ಹರಡಿಸಿದ ಸಣ್ಣತನ ನಿಮ್ಮದು, ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ್ದ ವಿಚಾರದಲ್ಲಿ ಸರ್ಕಾರದ ಸಚಿವರು ನೀಡುತ್ತಿರುವ ಹೇಳಿಕೆಗಳಿಗೆ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ಎಡಬಿಡಂಗಿತನ ಮತ್ತು ರಾಜಕಾರಣ […]

Advertisement

Wordpress Social Share Plugin powered by Ultimatelysocial