ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕರು ಒಂದು ಸಂದೇಶ ಕಳಿಸಿದ್ದಾರೆ ಎಂದು ರಾಜ್ಯಸಭಾ ಟಿಕೆಟ್ ವಂಚಿತ ರಮೇಶ್ ಕತ್ತಿ ಇಂದು ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಎರಡು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ಸಂತೋಷವಾಗಿದ್ದು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿದ್ದೇವೆ ಎಂಬ ಸ್ಪಷ್ಟ ಸಂದೇಶ ಹೈಕಮಾಂಡ್ ಕಳಿಸಿದೆ ಎಂದು ತಿಳಿಸಿದರು. ನಾನೂ ಕೂಡ ರಾಜ್ಯಸಭಾ ಟಿಕೆಟ್ ಅಪೇಕ್ಷಿತನಾಗಿದ್ದೆ. ಪಕ್ಷಕ್ಕೆ ದುಡಿದ ನಮ್ಮ ಜಿಲ್ಲೆಯಯವರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅಭ್ಯರ್ಥಿಗಳಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆಗಳು ಎಂದು ಹೇಳಿದರು. ಸದ್ಯ ನಾವು ಇಬ್ಬರಿಗೂ ಸಹಕಾರ ಕೊಡುತ್ತೇನೆ. ಯಾವಾಗಲೂ ಅವರ ಜೊತೆ ಇರ್ತೇವೆ. ರಾಜ್ಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರು ಕೆಲಸ ಮಾಡಲಿ ಎಂದು ಟಿಕೆಟ್ ವಂಚಿತ ರಮೇಶ್ ಕತ್ತಿರ ಅವರು ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತಿಸಿದ್ದಾರೆ.
ಬಿಜೆಪಿ ನಾಯಕರ ಸಂದೇಶ

Please follow and like us: