ಬೀದರ್: ಬೀದರ್ ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹಾದೇವ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತ ವಿಭಾಗದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಹೊರಡಿಸಿದ ಆದೇಶದಲ್ಲಿ ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹದೇವ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೀದರ್ಗೆ ರಾಮಚಂದ್ರನ್ ಆರ್. ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇವರು ಈ ಹಿಂದೆ ರಾಷ್ಟ್ರೀಯ ಆರೋಗ್ಯ ನಿರ್ದೇಶನಾಲಯ ಬೆಂಗಳೂರಿನ ಯೋಜನಾ ನಿರ್ದೇಶಕರಾಗಿದ್ದರು.