ಬೆಳೆ ನಷ್ಟ ಸಂಭವಿಸಿರುವ ರೈತರಿಗೆ ಕೂಡಲೇ ಪರಿಹಾರ ವಿತರಣೆ ಕ್ರಮ

ರಾಜ್ಯ ಸರ್ಕಾರ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲವು ಷರತ್ತುಗಳನ್ನು ವಿಧಿಸಿದ್ದರೆ ಇವುಗಳಲ್ಲಿ ಕೆಲವು ಷರತ್ತುಗಳನ್ನು ಸಡಿಲಿಕೆ ಮಾಡಿದ್ದು, ಇದರಿಂದ ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಸಹಾಯಕವಾಗಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗೆ ಅವಕಾಶ ನೀಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ನೆರೆ ಜಿಲ್ಲೆಯ ಹಾಗೂ ರಾಜ್ಯದ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿಗಳನ್ನು ನಿರ್ವಹಿಸಬಹುದು.  ರೈತರು ಉತ್ಪಾದನೆ ಮಾಡಿದ ಬೆಳೆಗಳಿಗೆ ಒಳ್ಳೆಯ ಬೆಲೆ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಬೆಳೆ ನಷ್ಟ ಸಂಭವಿಸಿರುವ ರೈತರಿಗೆ ಕೂಡಲೇ ಪರಿಹಾರ ವಿತರಣೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಬೇಕು, ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಿಸಿ ಸಹಾಯ ಮಾಡಬೇಕು . ಸರ್ಕಾರ ಬರಪೀಡಿತ ತಾಲೂಕುಗಳಲ್ಲಿ ನೀರಿನ ಸೌಲಭ್ಯ ಹಣ ಬಿಡುಗಡೆ ಮಾಡಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಮೇಕ್ ಇನ್ ಇಂಡಿಯಾಗೆ ಕೊರೊನಾ ವೈರಸ್ ವರವಾಗಿದೆ

Tue Apr 28 , 2020
ನವದೆಹಲಿ: ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ವಿವಿಧ ಚಟುವಟಿಕೆಗಳು ಆರಂಭವಾಗಿದ್ದು, ಇಂದೊಂದು ವರವಾಗಿ ಪರಿಣಮಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ವರವೊಂದು ಸಾಂಕ್ರಾಮಿಕದ ವೇಷದಲ್ಲಿ ಭಾರತಕ್ಕೆ ಬಂದಿದೆ ಎಂದಿದ್ದಾರೆ.ಭಾರತದಲ್ಲಿ ಸಾಕಷ್ಟು ಚಟುವಟಿಕೆಗಳು ಪ್ರಾರಂಭವಾಗಿವೆ. ನಾವು ಪಿಪಿಇಗಳನ್ನು ತಯಾರಿಸುತ್ತಿದ್ದೇವೆ. ದೇಶದಲ್ಲಿ ನೂರಕ್ಕೂ […]

Advertisement

Wordpress Social Share Plugin powered by Ultimatelysocial