ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ.ಯಡಿಯೂರಪ್ಪ ಹಣಕಾಸು ಸಮಸ್ಯೆಯಾದರು ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡುವುದನ್ನು ನಿಲ್ಲಿಸುವುದು ಬೇಡ ಎಂದು ಅಧಿಕಾರಿಗಳಿಗೆ ನರ್ದೇಶನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಕೇಂದ್ರ ರ್ಕಾರದ ವಿಶೇಷ ನೆರವು ಕೂಡ ಘೋಷಿಸಲಾಗಿದ್ದು, ಕೋವಿಡ್ ನಿಂದ ಶಿಕ್ಷಣ ಇಲಾಖೆ ಮೇಲೆ ದೊಡ್ಡ ಪರಿಣಾಮವಾಗಿರುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗಳು ಹಾಗೂ ತರಗತಿಗಳು ಹೇಗೆ ನಡೆಸುವುದು ಎಂಬುದೆ ದೊಡ್ಡಸವಾಲಾಗಿದೆ. ಜೂನ್ ೨೫ ರಿಂದ ಎಸ್ ಎಸ್ ಎಲ್ ಸಿ. ಪರೀಕ್ಷೆಗಳ ಮುನ್ನೆಚ್ಚರಿಕ್ಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ನಿಲ್ಲಿಸುವುದು ಬೇಡ: ಸಿಎಂ

Please follow and like us: