ಕೊಟ್ಟೂರು ತಾಲ್ಲೂಕಿನಲ್ಲಿ ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದ್ದಾರೆ. ಮರಳು ಮಾಫಿಯಾ ಮತ್ತು ಕೃತಕ ಮರಳು ಅಭಾವ ತಪ್ಪಿಸುವ ಉದ್ದೇಶದಿಂದ ಹೊಸ ಮರಳು ನೀತಿ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದ್ದು, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ಸಮಿತಿಯಲ್ಲಿರುತ್ತಾರೆ. ಈ ಸಮಿತಿ ಗ್ರಾಮೀಣ ಭಾಗಕ್ಕೆ ಸೀಮಿತವಾಗಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಮನೆ ನಿರ್ಮಿಸುವವರು ಮರಳು ಬೇಕಾದಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಟನ್ ಮರಳಿಗೆ 360 ರೂ. ಪಾವತಿಸಿ, ಯಂತ್ರಗಳನ್ನು ಬಳಸದೆ ಟ್ರ್ಯಾಕ್ಟರ್ ಗೆ ಮರಳನ್ನು ತುಂಬಿಸಿಕೊಳ್ಳಬೇಕು. ಸಂದಾಯವಾದ ಹಣದಲ್ಲಿ 66 ರೂಪಾಯಿಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ನೀಡಿ ಉಳಿದ ಹಣವನ್ನು ಗ್ರಾಮದ ಅಭಿವೃದ್ಧಿಗೆ ಬಳಸಬೇಕು.
ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಹಿ ಸುದ್ದಿ

Please follow and like us: