ಉತ್ತರ ಕರ್ನಾಟಕದ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊAಡಿದೆ. ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರುವ ಕಾರಣ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ನೀರಿನ ಒಳಹರಿವು ಜೂನ್ ಮೊದಲ ವಾರದಲ್ಲೇ ಆರಂಭಗೊAಡಿದೆ. ಈಗಾಗಲೇ ೧೨.೭೬೧ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದರ ಜತೆಗೆ ಹಿಪ್ಪರಗಿ ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.
ಮಹಾರಾಷ್ಟ್ರದ ನೀರು ಕರ್ನಾಟಕಕ್ಕೆ ಬಂದು ಸೇರುವ ರಾಜಾಪೂರ ಬ್ಯಾರೇಜ್ ಬಳಿ ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ. ಕಳೆದ ವರ್ಷ ಜಲಾಶಯಕ್ಕೆ ಜುಲೈ ೩ರಿಂದ ಒಳಹರಿವು ಆರಂಭಗೊAಡಿತ್ತು. ಡಿಸೆಂಬರ್ ನಿಂದ ಒಳಹರಿವು ಸಂಪೂರ್ಣ ನಿಲ್ಲಿಸಲಾಗಿತ್ತು. ಆ ವರ್ಷದ ಜಲಾಶಯದಲ್ಲಿ ಇತಿಹಾಸದಲ್ಲಿಯೇ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ೫೧೯.೬೦ ಮೀಟರ್ ಎತ್ತರದ ಜಲಾಶಯದಲ್ಲಿ ಇಂದು ೫೦೯.೫೫ ಮೀಟರ್ ನೀರು ಸಂಗ್ರಹವಿದೆ. ಸದ್ಯ ೨೭.೭೮೮ ಟಿಎಂಸಿ ನೀರು ಶೇಖರಣೆಯಾಗಿದೆ. ನಿತ್ಯ ೧೪೦೫೦ ಮೀಟರ್ ನೀರು ಒಳಹರಿವಿನ ರೂಪದಲ್ಲಿ ಬರುತ್ತಿದ್ದು, ೯೭೮೦ ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯದಿಂದ ಬಿಡಲಾಗುತ್ತಿದೆ. ಜಲಾಶಯದ ಗೇಟ್ ಮತ್ತು ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ೯.೧೫೦ ಕ್ಯೂಸೆಕ್ ನೀರು ನಾರಾಯಣಪುರ ಜಲಾಶಯಕ್ಕೆ ಹರಿದು ಬಿಡಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಹೆಚ್ಚಾದ ಮಳೆ ರೈತರಲ್ಲಿ ಮುಖದಲ್ಲಿ ಮಂದಹಾಸ

Please follow and like us: