ತಿರುವನಂತಪುರ: ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ, ಬರಹಗಾರ ವಿರೇಂದ್ರ ಕುಮಾರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ವಿರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದ್ದಿಸಂಸ್ಥೆಗಳಾದ ಪಿಟಿಐ ಮತ್ತು ಐಎನ್ ಎಸ್ ಗಳ ಅಧ್ಯಕ್ಷರು ಮತ್ತು ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವಿರೇಂದ್ರ ಕುಮಾರ್ ಅವರು ಅನಾರೋಗ್ಯದಿಂದ ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.
ಮಾಜಿ ಕೇಂದ್ರ ಸಚಿವ ವಿಧಿವಶ

Please follow and like us: